ಫೆ.23: ಹೈಕೋರ್ಟ್ ಮಧ್ಯಂತರ ಆದೇಶ ದುರ್ಬಳಕೆ ವಿರುದ್ಧ ಎಸ್ಸೆಸ್ಸೆಫ್ ನಿಂದ ರಾಜ್ಯಾದ್ಯಂತ ಪ್ರತಿಭಟನೆ
ಮಂಗಳೂರು: ಹಿಜಾಬ್ ಸಂಬಂಧಿತ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ನ ಮಧ್ಯಂತರ ಆದೇಶವನ್ನು ದುರುಪಯೋಗಪಡಿಸುವ ಮೂಲಕ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿಪಡಿಸುವ ಪ್ರಸಂಗಗಳು ಅಲ್ಪಸಂಖ್ಯಾತ ಇಲಾಖೆ ಸಂಸ್ಥೆಗಳು ಸಹಿತ ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ನಡೆದಿದೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಫೆ.23 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಸ್ಸೆಸ್ಸೆಫ್ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಹಾಗೂ ಪ್ರ.ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story