Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 117 ಜಿಲ್ಲೆಗಳಲ್ಲಿ ಒಂದು ಲಕ್ಷ ಕೋಟಿ...

117 ಜಿಲ್ಲೆಗಳಲ್ಲಿ ಒಂದು ಲಕ್ಷ ಕೋಟಿ ರೂ.ವೆಚ್ಚದಲ್ಲಿ 5,795 ಕಿ.ಮೀ.ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದೆ

ವಾರ್ತಾಭಾರತಿವಾರ್ತಾಭಾರತಿ21 Feb 2022 10:19 PM IST
share
117 ಜಿಲ್ಲೆಗಳಲ್ಲಿ ಒಂದು ಲಕ್ಷ ಕೋಟಿ ರೂ.ವೆಚ್ಚದಲ್ಲಿ 5,795 ಕಿ.ಮೀ.ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದೆ

ಹೊಸದಿಲ್ಲಿ,ಫೆ.21: ದೇಶದ 117 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ 5,795 ಕಿ.ಮೀ.ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಒಂದು ಲಕ್ಷ ಕೋ.ರೂ.ಗಳ ಯೋಜನೆಗೆ ಕೇಂದ್ರವು ಚಾಲನೆ ನೀಡಲಿದೆ.
‌
66,000 ಕೋ.ರೂ.ವೆಚ್ಚದಲ್ಲಿ 222 ಯೋಜನೆಗಳಡಿ ಈ ಜಿಲ್ಲೆಗಳಲ್ಲಿ ಈಗಾಗಲೇ ನಿರ್ಮಾಣಗೊಳ್ಳುತ್ತಿರುವ 5,566 ಕಿ.ಮೀ.ಹೆದ್ದಾರಿಗಳಿಗೆ ಹೆಚ್ಚುವರಿಯಾಗಿ ವಿಸ್ತರಣೆಗಾಗಿ 221 ಯೋಜನೆಗಳನ್ನು ರಸ್ತೆ ಸಚಿವಾಲಯವು ಗುರುತಿಸಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ಎನ್ಎಚ್ಎಐ)ವು ನೂತನ ಹೆದ್ದಾರಿ ಯೋಜನೆಗಳಿಗಾಗಿ 1.04 ಲ.ಕೋ.ರೂ.ಗಳನ್ನು ವೆಚ್ಚ ಮಾಡಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ನಾಲ್ಕು ವರ್ಷಗಳಷ್ಟು ಹಳೆಯದಾಗಿರುವ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಯೋಜನೆಗಳ ಮೇಳೈಸುವಿಕೆ, ಕೇಂದ್ರ ಮತ್ತು ರಾಜ್ಯಮಟ್ಟದ ಅಧಿಕಾರಿಗಳ ಸಹಯೋಗ ಮತ್ತು ಮಾಸಿಕ ಜಿಲ್ಲಾ ಶ್ರೇಯಾಂಕಗಳ ಮೂಲಕ ಕನಿಷ್ಠ ಅಭಿವೃದ್ಧಿಗೊಂಡಿರುವ ಜಿಲ್ಲೆಗಳ ತ್ವರಿತ ಪರಿವರ್ತನೆಯ ಉದ್ದೇಶವನ್ನು ಹೊಂದಿದೆ.
ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದ ಮೊದಲ ಮತ್ತು ಎರಡನೇ ಹಂತದಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಜಮ್ಮು-ಕಾಶ್ಮೀರ, ಮಹಾರಾಷ್ಟ್ರ, ಜಾರ್ಖಂಡ್, ಒಡಿಶಾ, ಪ.ಬಂಗಾಳ,ತೆಲಂಗಾಣ ಇತ್ಯಾದಿ ರಾಜ್ಯಗಳ ಹಲವಾರು ಜಿಲ್ಲೆಗಳು ಒಳಗೊಂಡಿವೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಮಾಹಿತಿಯಂತೆ ಎಲ್ಲ ಮಹತ್ವಾಕಾಂಕ್ಷೆಯ ಜಿಲ್ಲೆಗಳು ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಜೋಡಣೆಗೊಂಡಿವೆ ಮತ್ತು ವಿಸ್ತರಣೆಯು ಈ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲಿದೆ.
ಕಳೆದ ಐದು ವರ್ಷಗಳಲ್ಲಿ ಸುಮಾರು 6,575 ಕಿ.ಮೀ.ರಾಷ್ಟ್ರೀಯ ಹೆದ್ದಾರಿಗಳು ನಿರ್ಮಾಣಗೊಂಡಿದ್ದು,ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನು ಸಂಪರ್ಕಿಸಲಾಗಿದೆ. ಹಾಲಿ ನಡೆಯುತ್ತಿರುವ ಮತ್ತು ಮುಂಬರುವ ಯೋಜನೆಗಳನ್ನು ಸೇರಿಸಿದರೆ ಮುಂದಿನ ಐದು ವರ್ಷಗಳಲ್ಲಿ ಈ ಜಿಲ್ಲೆಗಳಲ್ಲಿಯ ರಾಷ್ಟ್ರೀಯ ಹೆದ್ದಾರಿ ಜಾಲವು 18,000ಕ್ಕೂ ಅಧಿಕ ಕಿ.ಮೀ.ಗೆ ವಿಸ್ತರಣೆಗೊಳ್ಳಲಿದೆ.

ಮಾನವ ಅಭಿವೃದ್ಧಿ ಸೂಚ್ಯಂಕದ ಮೇಲೆ ಪರಿಣಾಮವನ್ನು ಬೀರುವ ಆರೋಗ್ಯ ಮತ್ತು ಪೋಷಣೆ,ಶಿಕ್ಷಣ,ಕೃಷಿ ಮತ್ತು ಜಲ ಸಂಪನ್ಮೂಲಗಳು, ಆರ್ಥಿಕ ಸೇರ್ಪಡೆ,ಕೌಶಲ್ಯಾಭಿವೃದ್ಧಿ ಮತ್ತು ಪ್ರಾಥಮಿಕ ಮೂಲಸೌಕರ್ಯಗಳ ಆಧಾರದಲ್ಲಿ ನೀತಿ ಆಯೋಗವು ಈ ಜಿಲ್ಲೆಗಳನ್ನು ಗುರುತಿಸಿದೆ.

2022-23ನೇ ಸಾಲಿನ ಕೇಂದ್ರ ಮುಂಗಡಪತ್ರವು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಮೂಲಭೂತ ಸೌಕರ್ಯ ಅಭಿವೃದ್ಧಿಯ ಮೇಲೆ ಗಮನವನ್ನು ಕೇಂದ್ರೀಕರಿಸಿದೆ.

ಹಿಂದಿನ ವರ್ಷದ ಮುಂಗಡಪತ್ರ ಅಂದಾಜಿನಲ್ಲಿಯ 1.18 ಲ.ಕೋ.ರೂ.ಗೆ ಹೋಲಿಸಿದರೆ 2022-23ನೇ ಸಾಲಿಗೆ ಶೇ.68ರಷ್ಟು ಹೆಚ್ಚು,ಅಂದರೆ ಒಟ್ಟು 1.99 ಲ.ಕೋ.ರೂ.ಗಳನ್ನು ಹಂಚಿಕೆ ಮಾಡಲಾಗಿದೆ.
 
ಹೆಚ್ಚಿಸಲಾಗಿರುವ ಬಜೆಟ್ ಹಣದಲ್ಲಿ ಬಹುಭಾಗವನ್ನು ಎನ್ಎಚ್ಎಐಗಾಗಿ ಮೀಸಲಿರಿಸಲಾಗಿದೆ. ಕಳೆದ ವರ್ಷದ 76,665 ಕೋ.ರೂ.ಗಳಿಗೆ ಹೋಲಿಸಿದರೆ 2022-23ನೇ ಸಾಲಿಗೆ ಅದಕ್ಕೆ ಶೇ.133ರಷ್ಟು ಹೆಚ್ಚು ಅಂದರೆ 1.34 ಲ.ಕೋ.ರೂ.ಗಳನ್ನು ಹಂಚಿಕೆ ಮಾಡಲಾಗಿದೆ.

ಹೆಚ್ಚುವರಿ ನಿಧಿಯೊಂದಿಗೆ ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ ಸಂಪರ್ಕಗಳನ್ನು ಬಲಗೊಳಿಸುವುದು ಸೇರಿದಂತೆ ಹೆದ್ದಾರಿ ಕಾರ್ಯಕ್ರಮಕ್ಕೆ ಹೆಚ್ಚಿನ ಉತ್ತೇಜನ ದೊರೆಯಲಿದೆ.
ವಿತ್ತವರ್ಷ 2022ರಲ್ಲಿ 12,000 ಕಿ.ಮೀ.ಹೆದ್ದಾರಿ ನಿರ್ಮಾಣದ ಗುರಿಯನ್ನು ಹೊಂದಲಾಗಿದ್ದು,ವಿತ್ತವರ್ಷ 2023ಕ್ಕೆ ಗುರಿಯನ್ನು ಪ್ರಗತಿಯಲ್ಲಿರುವ ಯೋಜನೆಗಳು ಸೇರಿದಂತೆ 25,000 ಕಿ.ಮೀ.ಗಳಿಗೆ ಇಮ್ಮಡಿಗೊಳಿಸಲಾಗಿದೆ.

2014-15ರಿಂದೀಚಿಗೆ ಎನ್ಎಚ್ಎಐದ ಸಾಲವು 24,188 ಕೋ.ರೂ.ಗಳಿಂದ 3.44 ಲ.ಕೋ.ರೂ.ಗೇರಿದೆ,ಅಂದರೆ 14 ಪಟ್ಟು ಹೆಚ್ಚಾಗಿದೆ. 2024-25ರ ವೇಳೆಗೆ ಸಾಲದ ಪ್ರಮಾಣವನ್ನು ಒಂದು ಲ.ಕೋ.ರೂ.ಗಳಷ್ಟು ಕಡಿಮೆ ಮಾಡಲು ಸರಕಾರವು ಉದ್ದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X