ಪಂಜಿಮೊಗರು: ಪ್ರಾರ್ಥನಾ ಕೇಂದ್ರ ನೆಲಸಮ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಲತೀಶ್ / ಧನಂಜಯ್
ಮಂಗಳೂರು, ಫೆ.21: ನಗರ ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆ.5ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬಜ್ಪೆಯ ಲತೀಶ್ ಮತ್ತು ಪಂಜಿಮೊಗರುವಿನ ಧನಂಜಯ್ ಎಂದು ಗುರುತಿಸಲಾಗಿದೆ.
ಸುಮಾರು 40 ವರ್ಷದ ಹಿಂದೆ ಸ್ಥಾಪಿಸಲಾದ ಈ ಪ್ರಾರ್ಥನಾ ಕೇಂದ್ರವನ್ನು ಜೆಸಿಬಿ ಬಳಸಿ ಕೆಡವಲಾಗಿತ್ತು. ಇದರಿಂದ ಆಕ್ರೋಶಗೊಂಡ ಸ್ಥಳೀಯ ಕ್ರೈಸ್ತರು ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕೂಳೂರು ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಸಿದ್ದರು.
ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
Next Story





