ಉಪ್ಪಳದಲ್ಲಿ ರಸ್ತೆ ಅಪಘಾತ: ತುಮಕೂರಿನ ವ್ಯಕ್ತಿ ಮೃತ್ಯು

ಕಾಸರಗೋಡು, ಫೆ.22: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಳ ಹಿದಾಯತ್ ನಗರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಮೂಲತಃ ತುಮಕೂರು ನಿವಾಸಿ ಸೈಯ್ಯದ್ ಬಾಬ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಇವರು ಉಪ್ಪಳ ಮಣಿಮುಂಡದಲ್ಲಿ ವಾಸವಾಗಿದ್ದರು. ಅವರಿಂದು ಬೆಳಗ್ಗೆ ಕೆಲಸಕ್ಕೆಂದು ಬೈಕಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಸೈಯ್ಯದ್ ಬಾಬ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಿಸಿಕೊಂಡಿದ್ದಾರೆ.
Next Story





