ಹಿಮಾಚಲ ಪ್ರದೇಶ: ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 7 ಮಂದಿ ಮೃತ್ಯು

ಶಿಮ್ಲಾ: ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪಟಾಕಿ ತಯಾರಿಸುತ್ತಿದ್ದ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಜಿಲ್ಲಾ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉನಾ ಜಿಲ್ಲೆಯ ಬತು ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಉನಾ ಜಿಲ್ಲಾಧಿಕಾರಿ ರಾಘವ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.
ಮೇಲ್ನೋಟಕ್ಕೆ, ಸಾವನ್ನಪ್ಪಿದವರು ಹಾಗೂ ಗಾಯಗೊಂಡವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರು ಎಂದು ಅವರು ಹೇಳಿದರು.
ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದಾರೆ.
Next Story





