ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ರಾಜಭವನಕ್ಕೆ ಕಾಂಗ್ರೆಸ್ ಪಾದಯಾತ್ರೆ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಕಾಂಗ್ರೆಸ್ ಶಾಸಕರು ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ ನಡೆಸಿದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹರಿಪ್ರಸಾದ್, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಖಾದರ್, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಮಾಜಿ ಸಚಿವ ಎಚ್.ಕೆ. ಪಾಟೀಲ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಜರಿದ್ದರು.

Next Story





