ಕೊರಗ ಸಮುದಾಯದಲ್ಲಿ ಪಿಎಚ್ಡಿ ಪದವಿ ಪಡೆದ ಮೊದಲ ಮಹಿಳೆ ಸಬಿತಾ ಗುಂಡ್ಮಿ

ಉಡುಪಿ, ಫೆ.22: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಗುಂಡ್ಮಿಯ ಸಬಿತಾ ಕೊರಗ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಪ್ರಾದ್ಯಾಪಕ ಪ್ರೊ.ಜೋಗನ್ ಶಂಕರ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಇವ್ಯಾಲುವೇಶನ್ಸ್ ಆಫ್ ಪಾಲಿಸಿಸ್ ಆ್ಯಂಡ್ ಪ್ರೋಗ್ರಾಮ್ಸ್ ಆಫ್ ಟ್ರೈಬಲ್ ಡೆವಲಪ್ಮೆಂಟ್ ಆಫ್ ಕರ್ನಾಟಕ ಸ್ಟೇಟ್-ಎ ಸಿಚುವೇಷನಲ್ ಅನಾಲಿಸಿಸ್’ ವಿಷಯದ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಕರಾವಳಿಯ ಮೂಲನಿವಾಸಿಗಳೆಂದೇ ಪರಿಗಣಿತವಾದ ಬುಡಕಟ್ಟು ಕೊರಗ ಸಮುದಾಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊತ್ತಮೊದಲ ಮಹಿಳೆ ಸಬಿತಾ ಗುಂಡ್ಮಿ. ಡಾ.ಸಬಿತಾ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತಿದ್ದಾರೆ.
Next Story