ಮಟ್ಟಿ ಲಕ್ಷ್ಮೀನಾರಾಯಣ ರಾವ್‌ಗೆ ಸೇವಾಭೂಷಣ ಪ್ರಶಸ್ತಿ

ಉಡುಪಿ, ಫೆ.22: ಯಕ್ಷಗಾನ ಕಲಾರಂಗದಲ್ಲಿ ಇಪ್ಪತ್ತೇಳು ವರ್ಷಗಳ ಕಾಲ ಕೋಶಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣ ಇವರ ನೆನಪಿನಲ್ಲಿ ಸಂಸ್ಥೆ ನೀಡುವ ಸೇವಾಭೂಷಣ ಪ್ರಶಸ್ತಿಗೆ ಈ ಬಾರಿ ಕರ್ಣಾಟಕ ಬ್ಯಾಂಕ್‌ನ ನಿವೃತ್ತ ಅಧಿಕಾರಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಮಟ್ಟಿ ಲಕ್ಷ್ಮೀನಾರಾಯಣ ರಾವ್ ಇವರು ಆಯ್ಕೆಗೊಂಡಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಫೆ.28ರ ಸೋಮವಾರ ಸಂಜೆ 5:30ಕ್ಕೆ ಪೇಜಾವರ ಮಠದ ಶ್ರೀರಾಮಠಲ ಸಭಾಭವನದಲ್ಲಿ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಸ್ಥಿತಿಯಲ್ಲಿ ಜರಗಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
Next Story





