Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಪಾಲರು ಯಾರ ಕೈಗೊಂಬೆ ಆಗುವುದು ಬೇಡ,...

ರಾಜ್ಯಪಾಲರು ಯಾರ ಕೈಗೊಂಬೆ ಆಗುವುದು ಬೇಡ, ಕೂಡಲೇ ಕೇಂದ್ರಕ್ಕೆ ವರದಿ ಸಲ್ಲಿಸಲಿ: ಎಚ್‍ಡಿಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ22 Feb 2022 10:52 PM IST
share
ರಾಜ್ಯಪಾಲರು ಯಾರ ಕೈಗೊಂಬೆ ಆಗುವುದು ಬೇಡ, ಕೂಡಲೇ ಕೇಂದ್ರಕ್ಕೆ ವರದಿ ಸಲ್ಲಿಸಲಿ: ಎಚ್‍ಡಿಕೆ ಒತ್ತಾಯ

ಬೆಂಗಳೂರು, ಫೆ.22: ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಕುದಿಯುವ ಕುಲುಮೆಯಾಗಿದೆ. ಇಂಥ ಸೂಕ್ಷ್ಮ ಸಮಯದಲ್ಲಿ ರಾಜ್ಯಪಾಲರು ಮೌನವಾಗಿರುವುದು ಸರಿಯಲ್ಲ. ಅವರು ಯಾರ ಕೈಗೊಂಬೆಯೂ ಅಲ್ಲ, ಕೈಗೊಂಬೆ ಆಗಲೂಬಾರದು. ಹೀಗಾಗಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಸರಕಾರದಿಂದ ಮಾಹಿತಿ ಪಡೆದು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.

ಮಂಗಳವಾರ ನಗರದಲ್ಲಿರುವ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶೀಘ್ರವೇ ಜೆಡಿಎಸ್ ಪಕ್ಷದ ನಿಯೋಗವು ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ವಿಧಾನ ಮಂಡಲ ಕಲಾಪವನ್ನು ಸರಕಾರ ಸಮರ್ಪಕವಾಗಿ ನಡೆಸದ ಬಗ್ಗೆ ದೂರು ನೀಡಲಾಗುವುದು ಎಂದರು.

ಕೇಂದ್ರ ಸರಕಾರವೇ ರಾಜ್ಯ ಸರಕಾರವನ್ನು ವಜಾ ಮಾಡುವಂಥ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಠಿ ಆಗಿದೆ. ಬಿಜೆಪಿ ಪಕ್ಷದ ಸಂಸದರೊಬ್ಬರೇ ಸರಕಾರದ ಅಸಮರ್ಥತೆ ನಮಗೆ ನಾಚಿಕೆ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಜನರು ಕೂಡ ರೋಸಿ ಹೋಗಿದ್ದಾರೆ. ಹೀಗಾಗಿ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಲೇಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

ರಾಜ್ಯದಲ್ಲಿ ಇಂಥ ಕೆಟ್ಟ ವಾತಾವರಣ ಉಂಟಾಗಲು ರಾಜ್ಯ ಸರಕಾರವೇ ಕಾರಣ. ಅವರ ಅಸಮರ್ಪಕ ಕಾರ್ಯ ವೈಖರಿಯಿಂದ ಇಡೀ ಶಿಕ್ಷಣ ಕ್ಷೇತ್ರ ಬಂದ್ ಮಾಡಿ ಕೂರಿಸಿದ್ದಾರೆ. ಶಾಲೆ ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿ ಆಗಿದೆ. ಇನ್ನು ಹೈಕೋರ್ಟ್ ಅಂತೂ  ಬಿಬಿಎಂಪಿಗೆ ನಿತ್ಯವೂ ಛೀಮಾರಿ ಹಾಕುತ್ತಿದೆ. ಅಧಿಕಾರಿಗಳನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನೀಡಿದೆ. ಈ ಸರಕಾರಕ್ಕೆ ಜನರ ಬಗ್ಗೆ ಬದ್ಧತೆ ಇದೆಯಾ? ಎಂದು ಕುಮಾರಸ್ವಾಮಿ ಹೇಳಿದರು.

ಆಡಳಿತಾರೂಢ ಬಿಜೆಪಿ ಹಾಗೂ ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕುಮ್ಮಕ್ಕಾಗಿ ವಿಧಾನಮಂಡಲದ ಕಲಾಪವನ್ನು ಸಂಪೂರ್ಣವಾಗಿ ಹಾಳು ಮಾಡಿವೆ. ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣದ ವಂದನಾ ನಿರ್ಣಯದ ಮೇಲೆ ಸದನದಲ್ಲಿ ಚರ್ಚೆಗೆ ಅವಕಾಶಗಳು ಸಿಗಲಿಲ್ಲ. ಆಡಳಿತ ಪಕ್ಷದ ಸದಸ್ಯರು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುವುದು ಬಿಟ್ಟು ಬರೀ ಮೋದಿ ಅವರ ಸಾಧನೆಗಳ ಬಗ್ಗೆ ಮಾತ್ರ ಹೇಳಿದರು ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಸಿಎಂ ಅವರು ಕಾಂಗ್ರೆಸ್ ಧರಣಿ ಮಧ್ಯೆ ಉತ್ತರ ನೀಡಿದ್ದಾರೆ. ರಾಜ್ಯದ ವಿಧಾನ ಮಂಡಲದ ಇತಿಹಾಸದಲ್ಲಿ ಮೊದಲನೇ ಬಾರಿ ಈ ರೀತಿ ಕಲಾಪ ಬಲಿಯಾಗಿದೆ. ಅತ್ಯಂತ ಮಹತ್ವದ ವಿಚಾರಗಳು ಸದನದಲ್ಲಿ ಚರ್ಚೆ ಆಗಬೇಕಿತ್ತು. ಹಲವಾರು ಬಾರಿ ನಾನು ಹೇಳಿದ್ದೇನೆ. ಗಲಾಟೆ ಮಾಡುವವರನ್ನು ಹೊರ ಹಾಕಿ ಅಥವಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ. ಆದರೆ, ನಮ್ಮ ಮನವಿಯನ್ನು ಪರಿಗಣಿಸದೇ, ನಮ್ಮ ಪಕ್ಷಕ್ಕೆ ಮಾತನಾಡಲು ಅವಕಾಶವನ್ನು ನೀಡದೇ ಕಲಾಪವನ್ನು ಪ್ರತಿಷ್ಠೆಗೆ ಬಲಿ ಕೊಡಲಾಗಿದೆ ಎಂದು ಕುಮಾರಸ್ವಾಮಿ ದೂರಿದರು.

ಸದನದ ಕಲಾಪವನ್ನು ಹಾಳು ಮಾಡಿದ ಅಧಿಕೃತ ಪ್ರತಿಪಕ್ಷವೇ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೊರಟಿದೆ. ಅದೂ ರಾಜಭವನದ ತನಕ ನಡೆದುಕೊಂಡು ಹೋಗಿ ಮನವಿ ಕೊಟ್ಟು ಪ್ರಚಾರ ಪಡೆಯುವ ಹುನ್ನಾರ. ಯಾವ ಮುಖ ಇಟ್ಟುಕೊಂಡು ಆ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ? ಈ ನಾಟಕವನ್ನು ಬೇರೆ ರಾಜ್ಯದ ಜನರು ನೋಡಬೇಕೆ ಎಂದು ಕುಮಾರಸ್ವಾಮಿ ಗುಡುಗಿದರು.

ಹಿಜಾಬ್, ಕೇಸರಿ ಶಾಲು ಹಾಗೂ ಶಿವಮೊಗ್ಗದಲ್ಲಿ ನಡೆದ ಕೊಲೆಗೆ ಸರಕಾರ ತಪ್ಪು ಹೆಜ್ಜೆಗಳೇ ಕಾರಣ. ಬಡವರ ಮನೆ ಮಕ್ಕಳನ್ನು ಇಂಥ ಘಟನೆಗಳು ಬಳಿ ತೆಗೆದುಕೊಳ್ಳುತ್ತವೆ. ಶ್ರೀಮಂತರ ಮಕ್ಕಳು, ಉಳ್ಳವರ ಮಕ್ಕಳು ಅಥವಾ ಮೇಲ್ಜಾತಿಯವರ ಮಕ್ಕಳು ಇಂಥ ಘಟನೆಗಳಲ್ಲಿ ಭಾಗಿಯಾಗುವುದಿಲ್ಲ. ಎರಡೂ ಹೊತ್ತು ಊಟಕ್ಕೂ ಕಷ್ಟ ಇರುವ ಬಡವರ ಮಕ್ಕಳು ಇಂಥ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದಾರೆ. ಇಂಥ ವಿಷಯಗಳ ಬಗ್ಗೆ ಸದನ ಚರ್ಚೆ ನಡೆಸಬೇಕಿತ್ತು. ಇನ್ನಾದರೂ ರಾಷ್ಟ್ರೀಯ ಪಕ್ಷಗಳು ಬಡಮಕ್ಕಳ ಜೀವನದ ಜತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು.

ಶಿವಮೊಗ್ಗ ಘಟನೆಯಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ. ಒಬ್ಬರು ಇಬ್ಬರು ಅಂತಾರೆ, ಇನ್ನೊಬ್ಬರು ಮೂವರು ಅಂತಾರೆ, ಆಮೇಲೆ ಮತ್ತಿಬ್ಬರು 12 ಜನ ಅರೆಸ್ಟ್ ಅಂತಾರೆ. ಯಾರ ಮಾತು ನಂಬುವುದು ಬಿಡುವುದು. ಇದನ್ನೇ ಎಷ್ಟು ದಿನ ಪ್ರಚಾರಕ್ಕೆ ಇಡ್ತೀರಾ? ಸತ್ಯಾಸತ್ಯತೆ ಯಾವಾಗ ಹೊರ ಬರೋದು? ಕೇವಲ ಮರಣ ದಳ್ಳುರಿಯನ್ನೇ ಪ್ರಚಾರ ಮಾಡ್ತೀರಾ? ಎಂದು ಸರಕಾರವನ್ನು ಅವರು ತೀವ್ರವಾಗಿ ಪ್ರಶ್ನೆ ಮಾಡಿದರು.

ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ. ಕೊಲೆಯಾದ ಯುವಕ ಬಿಜೆಪಿ ಪರಿವಾರಕ್ಕೆ ಸೇರಿದವನು. ಆತನ ಬಗ್ಗೆ ಎಲ್ಲ ಮಾಹಿತಿ ಸರಕಾರದ ಬಳಿ ಇದೆ. ಆತನ ಪ್ರತೀ ಚಲನವಲನ ಎಲ್ಲ ಪೊಲೀಸರಿಗೆ ಗೊತ್ತಿದೆ. ಆದರೂ ರಕ್ಷಣೆ ನೀಡಲಿಲ್ಲ, ಆತನ ಜೀವ ಉಳಿಯಲಿಲ್ಲ. ಸಿಎಎ ಘಟನೆಯಲ್ಲಿ ಮಂಗಳೂರಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಗುಂಡು ಹಾರಿಸಲಾಯಿತು. ನಂತರ 10 ಲಕ್ಷ ಹಣ ಪರಿಹಾರ ಘೋಷಿಸಿ, ಮತ್ತೆ ಅವರನ್ನು ಗೂಂಡಾಗಳು ಅಂತ ಹೇಳಿದಿರಿ ಎಂದು ಅವರು ಟೀಕಿಸಿದರು.

ಡಿಜೆ ಹಳ್ಳಿಯಲ್ಲಿ ನಡೆದ ಘಟನೆಗೆ ಯಾರು ಕಾರಣ? ಇನ್ನೂ ಅನೇಕ ಯುವಕರನ್ನು ಈಗಲೂ ಜೈಲಿನಲ್ಲೇ ಇಡಲಾಗಿದೆ. ಆದರೆ ಘಟನೆಗೆ ಕಾರಣರಾದವರು ಕೆಪಿಸಿಸಿ ಅಧ್ಯಕ್ಷರ ಹಿಂದೆ ಮುಂದೆ ಆರಾಮಾಗಿ ಓಡಾಡಿಕೊಂಡಿದ್ದಾರೆ. ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆಯಂತೆ ಎಂದು ಕಾಂಗ್ರೆಸ್ ಪಕ್ಷದ ಮೇಲೆ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ನಡೆದ ಘಟನೆ ಪರಿಣಾಮಗಳು ಇಲ್ಲಿಗೇ ನಿಲ್ಲಲ್ಲ. ಸರಕಾರ ಎಚ್ಚರಿಕೆ ವಹಿಸಿ ಇದರ ಬಿಸಿ ಬೇರೆ ಕಡೆ ಹಬ್ಬದಂತೆ ಮಾಡಬೇಕು. ಆದರೆ, ಎರಡೂ ಮತ ಬ್ಯಾಂಕ್ ಸೃಷ್ಟಿ ಮಾಡಲು ಹೀಗೆ ಮಾಡ್ತಾ ಇದ್ದಾರೆ. ಮತ ಬ್ಯಾಂಕ್‍ಗಾಗಿ ಹೀಗೆ ಬಡವರನ್ನು ಬಳಸಿಕೊಳ್ತಾ ಇದ್ದಾರೆ. ಅದನ್ನು ಜನ ಅರ್ಥಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಶಾಸಕ ರಾಜಾ ವೆಂಕಟಪ್ಪ ನಾಯಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X