Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೆರವಣಿಗೆ ವೇಳೆಯ ಗಲಾಟೆಗೆ ನಾವು...

ಮೆರವಣಿಗೆ ವೇಳೆಯ ಗಲಾಟೆಗೆ ನಾವು ಕಾರಣರಲ್ಲ: ಸಂಸದ ಬಿ.ವೈ ರಾಘವೇಂದ್ರ

ವಾರ್ತಾಭಾರತಿವಾರ್ತಾಭಾರತಿ23 Feb 2022 3:30 PM IST
share
ಮೆರವಣಿಗೆ ವೇಳೆಯ ಗಲಾಟೆಗೆ ನಾವು ಕಾರಣರಲ್ಲ: ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ, ಫೆ.23: ಮೃತದೇಹದ ಮೆರವಣಿಗೆ ವೇಳೆಯ ಗಲಾಟೆಗೆ ನಾವು ಕಾರಣರಲ್ಲ. ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು,ಯಾರೂ ಸಹ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡೋದಿಕ್ಕೆ ಬರಲ್ಲ. ತುಂಬಾ ಸೂಕ್ಷ್ಮವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು. ಈ ಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ ಎಂದರು.

ಹರ್ಷನ ಅಂತಿಮ ಸಂಸ್ಕಾರ ಶಾಂತಿಯುತವಾಗಿ ನಡೆಯಲು ಎಲ್ಲ ಕ್ರಮ ತೆಗೆದುಕೊಂಡಿದ್ದೆವು. ನಮ್ಮ ನಾಯಕರಾದ ಈಶ್ವರಪ್ಪನವರ ನೇತೃತ್ವದಲ್ಲಿ ನಾನು ಹಾಗೂ ನಮ್ಮ ನಾಯಕರುಗಳು ಒಟ್ಟಾಗಿ ಶಾಂತಿಯುತವಾಗಿ ಎಲ್ಲವನ್ನು ನೆರವೇರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದೆವು. ಪೊಲೀಸ್ ಇಲಾಖೆಯ ಜೊತೆ ಕೈ ಜೋಡಿಸುವ ಕೆಲಸ ಮಾಡಿದ್ದೆವು. ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಎಂದು ಹೇಳಿದ್ದರು. ಆದರೂ ಅದನ್ನು ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ನಾವೆಲ್ಲ ಪೊಲೀಸರಿಗೆ ಸಹಕಾರ ನೀಡಿದ್ದೇವೆ ಎಂದು ತಿಳಿಸಿದರು.

ಹರ್ಷ ಅವರ ಮೃತದೇಹದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗ ಶಾಂತಿಗೆ ಹೆಸರುವಾಸಿಯಾದ ನಗರ. ಆದರೆ ಕಲ್ಲು ತೂರಾಟದಿಂದ ಕೆಟ್ಟ ಸಂದೇಶ ಹೋಗಿದೆ. ಇದಕ್ಕೆ ಮೂಲ ಕಾರಣರಾದವರನ್ನು ಬಂಧಿಸಬೇಕು. ಕಾನೂನು ರೀತಿಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಈ ಘಟನೆಯಾದ ಮೇಲೆ ಸಾಂತ್ವನ ಹೇಳುವ ದುಸ್ಥಿತಿ ಬರಬಾರದು. ಈ ರೀತಿಯ ಘಟನೆಗಳು ಮುಂದೆ ಆಗದಂತೆ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತ ಯೋಚಿಸುವ ಕಾಲ ಬಂದಿದೆ. ಮುಂದೆ ಈ ರೀತಿ ಆಗದಂತೆ ಏನು ಮಾಡಬೇಕು ಅಂತ ನಾವು ಸಹ ಗಮನ ಹರಿಸುತ್ತೇವೆ ಎಂದ ಅವರು,ಇದೇ ವೇಳೆ ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿರುವ ಪೊಲೀಸರಿಗೆ ಸಂಸದ ಬಿ.ವೈ. ರಾಘವೇಂದ್ರ ಅಭಿನಂದನೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X