Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಾದಿತ ಹೇಳಿಕೆಗಳಿಂದ ನಾಯಕತ್ವ...

ವಿವಾದಿತ ಹೇಳಿಕೆಗಳಿಂದ ನಾಯಕತ್ವ ಬೆಳೆಸಿಕೊಳ್ಳುವ ಮಾನಸಿಕತೆ ಸರಿಯಲ್ಲ: ಸ್ಪೀಕರ್ ಕಾಗೇರಿ

ವಾರ್ತಾಭಾರತಿವಾರ್ತಾಭಾರತಿ23 Feb 2022 7:20 PM IST
share
ವಿವಾದಿತ ಹೇಳಿಕೆಗಳಿಂದ ನಾಯಕತ್ವ ಬೆಳೆಸಿಕೊಳ್ಳುವ ಮಾನಸಿಕತೆ ಸರಿಯಲ್ಲ: ಸ್ಪೀಕರ್ ಕಾಗೇರಿ

ಬೆಂಗಳೂರು, ಫೆ. 23: ‘ಸಮಾಜದಲ್ಲಿ ಶಾಂತಿ, ಸಾಮರಸ್ಯ ಸೃಷ್ಟಿಸಬೇಕೇ ಹೊರತು, ವಿವಾದ ಸೃಷ್ಟಿಸುವ ಹೇಳಿಕೆಗಳನ್ನು ನೀಡಿ ನಾಯಕತ್ವ ಬೆಳೆಸಿಕೊಳ್ಳುವ ಮಾನಸಿಕತೆ ಸರಿಯಲ್ಲ. ಇದು ಸಮಾಜಕ್ಕೆ ಉಪಯುಕ್ತವೂ ಅಲ್ಲ' ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದಿಲ್ಲಿ ಆಕ್ಷೇಪಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿವಾದಾಸ್ಪದ ಹೇಳಿಕೆಗಳನ್ನು ವೈಭವೀಕರಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಮಾಧ್ಯಮಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಅನಗತ್ಯ ಹೇಳಿಕೆಗಳಿಗೆ ಪ್ರಾಮುಖ್ಯತೆ ನೀಡದೆ ವಿವೇಚನೆಯಿಂದ ನಡೆದುಕೊಳ್ಳಬೇಕು' ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.

‘ನಾನು ಈ ಮಾತುಗಳನ್ನು ಯಾವುದೇ ಒಂದು ಪಕ್ಷ ಅಥವಾ ವ್ಯಕ್ತಿಯನ್ನು ಉದ್ದೇಶಿಸಿ ಹೇಳುತ್ತಿಲ್ಲ. ಇದು ಎಲ್ಲರಿಗೂ ಅನ್ವಯ ಆಗುತ್ತದೆ. ಸಮಾಜದಲ್ಲಿ ಸಾಮರಸ್ಯ ಕದಡುತ್ತದೆ ಎನ್ನುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ವೈಭವೀಕರಿಸುವ ಅಗತ್ಯವಿದೆಯೇ ಎಂಬುದನ್ನು ಯೋಚಿಸಬೇಕು. ನಮಗೆ ಮಾತನಾಡಲು ಸ್ವಾತಂತ್ರ್ಯವಿದೆ. ಆದರೆ, ಮಾತಿನಿಂದ ಸಮಾಜಕ್ಕೆ ಕೆಡುಕು ಆಗಬಾರದು' ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

‘ಸಮಾಜದಲ್ಲಿ ಉತ್ತಮ ವಾತಾವರಣವನ್ನು ನಾವು ಸಂಸ್ಕಾರದಿಂದ ಬೆಳೆಸಬೇಕಿದೆ. ವೈಯಕ್ತಿಕ ಸಂಸ್ಕಾರ ಇರುವಂತೆ ಜನಸಮೂಹಕ್ಕೂ ಸಂಸ್ಕಾರ ಅಗತ್ಯ. ಸುಸಂಸ್ಕøತ ಜನಜೀವನ ರೂಪಿತ ಆಗಲು ಎಲ್ಲರೂ ಸಹಕರಿಸಬೇಕು. ಯಾರೂ ಬೌದ್ಧಿಕ ಸಂಕುಚಿತತೆ ಬೆಳೆಸಿಕೊಳ್ಳಬಾರದು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಉತ್ತಮ ವಾತಾವರಣದಲ್ಲೇ ಚರ್ಚಿಸಲು ಸಾಧ್ಯವಿದೆ' ಎಂದು ಅವರು ಹೇಳಿದರು.

‘ನೈತಿಕತೆ, ಮೌಲ್ಯಗಳ ಕುಸಿತಕ್ಕೆ ಕೇವಲ ಜನಪ್ರತಿನಿಧಿಗಳು, ರಾಜಕಾರಣಿಗಳು ಮಾತ್ರ ಕಾರಣರಲ್ಲ. ಸಮಾಜದ ಎಲ್ಲ ಸ್ತರಗಳು ಮತ್ತು ಸಂಸ್ಥೆಗಳಲ್ಲೂ ಮೌಲ್ಯಗಳ ಕುಸಿತ ಆಗಿದೆ. ಇದೊಂದು ವಿಷವರ್ತುಲ ಇದರಲ್ಲಿ ಎಲ್ಲರೂ ಸಿಲುಕಿಕೊಂಡಿದ್ದಾರೆ. ಮೌಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದರೂ ಅದು ಸಫಲವಾಗುತ್ತಿಲ್ಲ' ಎಂದು ಕಾಗೇರಿ ಹೇಳಿದರು. 

‘ಫೆ.14ರಿಂದ ಆರಂಭವಾದ ವಿಧಾನ ಮಂಡಲ ಜಂಟಿ ಅಧಿವೇಶನ ಕಲಾಪ 10 ದಿನ ನಡೆಯಬೇಕಿತ್ತು. ಆದರೆ, ಎರಡು ದಿನ ಮಾತ್ರ ನಡೆಯಿತು. ಉಳಿದ ಐದು ದಿನ ವಿಪಕ್ಷ ಧರಣಿ, ಗೊಂದಲದ ಮಧ್ಯೆ ಕಲಾಪ ಮುಂದೂಡಬೇಕಾಯಿತು. ವಿಪಕ್ಷ ಕಾಂಗ್ರೆಸ್ ಒಂದು ದಿನ ಪ್ರತಿಭಟನೆ ನಡೆಸಿ, ಉಳಿದ ದಿನ ಕಲಾಪದಲ್ಲಿ ಹಾಜರಾಗಬಹುದಿತ್ತು. ನಾನು ಅನೇಕ ಬಾರಿ ಅವರ ಮನವೊಲಿಸಿದರೂ ಸಮ್ಮತಿಸಲಿಲ್ಲ. ಎಲ್ಲವನ್ನು ಜನತೆ ಗಮನಿಸುತ್ತಿದ್ದಾರೆ' ಎಂದು ಅವರು ತಿಳಿಸಿದರು.

‘ಶಾಸಕರು, ಸಚಿವರ ವೇತನ, ಭತ್ತೆ ಹೆಚ್ಚಳವನ್ನು 2015ರ ಬಳಿಕ ಪರಿಷ್ಕರಣೆ ಮಾಡಿರಲಿಲ್ಲ. ಹಲವು ಮಂದಿ ಮಾಜಿ ಶಾಸಕರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಕೆಲವರ ಪರಿಸ್ಥಿತಿ ಕಷ್ಟದಲ್ಲಿದೆ. ಹೀಗಾಗಿ ವೇತನ, ಭತ್ತೆ ಪರಿಷ್ಕರಣೆಗೆ ಹೆಚ್ಚಳ ಮಾಡಬೇಕೆಂದು ಶಾಸಕರು ಒತ್ತಾಯಿಸಿದ್ದರು. ಹೀಗಾಗಿ ಸರಕಾರ ಮಸೂದೆ ಮಂಡಿಸಿದ್ದು, ಅನುಮೋದನೇ ನೀಡಲಾಗಿದೆ' ಎಂದು ಅವರು ಸಮರ್ಥನೆ ಮಾಡಿದರು.

‘ಮಾ.4ರಿಂದ 31ರ ವರೆಗೆ ಬಜೆಟ್ ಅಧಿವೇಶನ, ಜೊತೆಗೆ ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆ ನಡೆಸಬೇಕೆಂಬ ಉದ್ದೇಶವಿದೆ. ಆದರೆ, ಈ ಬಗ್ಗೆ ಸರಕಾರ ಎಷ್ಟು ದಿನಗಳ ಕಾಲ ಅಧಿವೇಶನ ನಡೆಸಬೇಕು ಎಂದು ಇನ್ನೂ ತೀರ್ಮಾನಿಸಿಲ್ಲ. ‘ಚುನಾವಣೆ ಸುಧಾರಣೆ' ಸಂಬಂಧ ಅಧಿವೇಶನದಲ್ಲಿ ಚರ್ಚಿಸಬೇಕಿತ್ತು. ಆದರೆ, ಸಾಧ್ಯವಾಗಿಲ್ಲ. ಇದೀಗ ಮತ್ತೊಮ್ಮೆ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಮಾಲೋಚನೆ ಚರ್ಚೆಗೆ ತೀರ್ಮಾನ ಮಾಡಲಾಗುವುದು'

-ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆ ಸ್ಪೀಕರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X