ಕಾಪು: ಎಮ್‍ಎನ್‍ಆರ್ ಟೀಂ ಬಳಗದಿಂದ ರಕ್ತದಾನ ಶಿಬಿರ
ಕಾಪು: ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಮ್.ಎನ್. ರಾಜೇಂದ್ರ ಕುಮಾರ್ ಅವರ 73ನೇ ಹುಟ್ಟು ಹಬ್ಬದ ಪ್ರಯುಕ್ತ ಟೀಂ ಡಾ. ಎಮ್.ಎನ್.ಆರ್ ಅಭಿಮಾನಿ ಬಳಗದ ವತಿಯಿಂದ ಒಂದು ತಿಂಗಳ ನಿರಂತರ ರಕ್ತದಾನ ಶಿಬಿರ ಹಾಗೂ ನೇತ್ರದಾನ ವಾಗ್ದಾನ ಆಯೋಜಿಸಲಾಗಿದೆ.
ಬುಧವಾರ ಕಾಪುವಿನಲ್ಲಿ ಸುದ್ದಿಗೋಷ್ಟಿಯಲ್ಲಿ ಬಳದ ಮುಖ್ಯ ಸಂಚಾಲಕ ಪುರುಷೋತ್ತಮ ಸಾಲ್ಯಾನ್ ತಿಳಿಸಿದರು.
ಕಾರ್ಯಕ್ರಮ ಫೆ. 24ರಿಂದ ಆರಂಭಗೊಳ್ಳಲಿದ್ದು, ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೇಡಿಕೆಗೆ ಅನುಗುಣವಾಗಿ ನಿರಂತರವಾಗಿ ಒಂದು ತಿಂಗಳ ರಕ್ತದಾನ ಶಿಬಿರ ನಡೆಯಲಿದೆ. ಇದೇ ಸಂದರ್ಭದಲ್ಲಿ ನೇತ್ರದಾನ ವಾಗ್ದಾನ ಕೈಗೊಳ್ಳಲಾಗುವುದು. ಈಗಾಗಲೇ 60 ಮಂದಿ ನೋಂದಾಯಿಸಿಕೊಂಡಿದ್ದು, 250 ಅಧಿಕ ಮಂದಿ ಕಾರ್ಯಕ್ರಮದಲ್ಲಿ ಶಿಬಿರದಲ್ಲಿ ನಿರೀಕ್ಷೆಯಿದೆ ಎಂದು ಹೇಳಿದರು.
ಪ್ರಶಾಂತ್ ಕುಮಾರ್, ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
Next Story