Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ...

ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ: ಕುಮಾರಸ್ವಾಮಿ ಆತಂಕ

ವಾರ್ತಾಭಾರತಿವಾರ್ತಾಭಾರತಿ23 Feb 2022 9:18 PM IST
share
ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ: ಕುಮಾರಸ್ವಾಮಿ ಆತಂಕ

ಬೆಂಗಳೂರು, ಫೆ. 23: ‘ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ‘ವಿಕೃತ ಕೇಕೆ' ಹಾಕುತ್ತಿವೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಶಿಕ್ಷಣದ ಕಾಶಿ ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ. ಎರಡು ವರ್ಷದಿಂದ ಕೋವಿಡ್ ಹೊಡೆತದಿಂದ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು. ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ?' ಎಂದು ಪ್ರಶ್ನಿಸಿದ್ದಾರೆ.

‘ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ‘ರಾಜಕೀಯ ಕೊರೊನ'ವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು. ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ‘ನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡು' ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ‘ಕಲಾಪಕ್ಕೆ ಕುಣಿಕೆ' ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು' ಎಂದು ದೂರಿದ್ದಾರೆ.

‘ನಿಗದಿತ ವೇಳಾಪಟ್ಟಿಗಿಂತ 3 ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ತೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದ ‘ಆತ್ಮವಂಚನೆಯ ಪರಾಕಾಷ್ಠೆ' ಇದು' ಎಂದು ಅವರು ಟೀಕಿಸಿದ್ದಾರೆ.

‘ಹಿಜಾಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ... ಇವೆಲ್ಲಾ ಯಾರಿಂದ ಯಾರಿಗಾಗಿ ನಡೆಯುತ್ತಿವೆ? ಈ ‘ಟೂಲ್‍ಕಿಟ್' ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲ ಪ್ರತಿಗಾಮಿ ಘಟನೆಗಳಿಗೂ ಸಂಬಂಧ ಇದೆ ಎನ್ನುವ ಅನುಮಾನ ನನ್ನದು. ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು' ಎಂದು ಅವರು ಒತ್ತಾಯಿಸಿದ್ದಾರೆ.

‘ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸಿರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ‘ದ್ವೇಷದಳ್ಳುರಿ' ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ' ಎಂದು ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸರಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು

‘ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ನಾನು ಮತ್ತೊಮ್ಮೆ ಆಗ್ರಹಿಸುತ್ತಿದ್ದೇನೆ. ಶಾಂತಿ-ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ರಾಜ್ಯ ಸರಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂಬುದು ನನ್ನ ಒತ್ತಾಯ'

-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X