ಉಡುಪಿ: ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಉಡುಪಿ, ಫೆ.23: ಶಿವಮೊಗ್ಗದಲ್ಲಿ ಗಲಭೆಗೆ ಪ್ರಚೋದನೆ ಮತ್ತು ಹಿಂಸಾಚಾರಕ್ಕೆ ನೇತೃತ್ವ ನೀಡಿದ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್, ಶಿವಮೊಗ್ಗ ಗಲಭೆಗೆ ಈಶ್ವರಪ್ಪನೇರ ಕಾರಣ. ಆದ್ದರಿಂದ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಇನ್ನಷ್ಟು ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಸ್‌ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಲೀಲ್ ಅಹ್ಮದ್ ಮಾತನಾಡಿದರು. ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಸಾದಿಕ್ ಎಫ್‌ಎಂ ಉಪಸ್ಥಿತರಿದ್ದರು. ವಾಹಿದ್ ಕುಂದಾಪುರ ಕಾರ್ಯ ಕ್ರಮ ನಿರೂಪಿಸಿದರು.
Next Story





