Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇವಸ್ಥಾನ ಪ್ರವಾಸೋದ್ಯಮಕ್ಕೆ ಆದ್ಯತೆ:...

ದೇವಸ್ಥಾನ ಪ್ರವಾಸೋದ್ಯಮಕ್ಕೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ23 Feb 2022 11:07 PM IST
share
ದೇವಸ್ಥಾನ ಪ್ರವಾಸೋದ್ಯಮಕ್ಕೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಫೆ. 23: ‘ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ ಅವಕಾಶವಿರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸಕ್ರ್ಯೂಟ್ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ‘ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆ ಹಾಗೂ ದೈವ ಸಂಕಲ್ಪ ಯೋಜನೆ'ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ‘ದೇವಸ್ಥಾನಗಳಲ್ಲಿ ಸೌಲಭ್ಯಗಳನ್ನು ಒದಗಿಸಲುಕ್ರಿಯಾ ಯೋಜನೆ ಸಿದ್ಧಪಡಿಸಿ' ಎಂದು ನಿರ್ದೇಶನ ನೀಡಿದರು.

‘ಐಟಿಎಂಎಸ್'ನ್ನು ಜಾರಿಗೆ ತಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ, ‘ದೇವಸ್ಥಾನಗಳ ನಿರ್ವಹಣೆ ಬಹಳ ಮುಖ್ಯ. ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಮುಂತಾದವುಗಳನ್ನು ದಾಖಲಿಸುವ ಪ್ರಯತ್ನವಾಗಬೇಕು. ದೇವಸ್ಥಾನಗಳ ಆಸ್ತಿಗಳ ನಿರ್ವಹಣೆಯನ್ನು ಅತ್ಯಂತ ಸಮರ್ಪಕವಾಗಿ ಮಾಡುವ ಅಗತ್ಯವಿದೆ' ಎಂದು ಹೇಳಿದರು.

‘ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಮಾಡಿ, ಪೂರ್ಣಪ್ರಮಾಣದಲ್ಲಿ ಸ್ಥಳೀಯವಾಗಿ ವ್ಯವಸ್ಥೆ ಮಾಡಿ ಆಡಳಿತ ಸುಧಾರಿಸುವ ಅಗತ್ಯವಿದೆ. ಸಾರ್ವಜನಿಕರ ದೇಣಿಗೆ ಹಾಗೂ ಆಸ್ತಿ ಒಳಗೊಂಡಿರುವುದರಿಂದ ನಿರ್ವಹಣೆಯ ಜೊತೆಗೆ ನಿಯಂತ್ರಣವೂ ಅಗತ್ಯ. ದೇವಸ್ಥಾನಗಳ ಅರ್ಚಕರು ಹಾಗೂ ಪೂಜಾರಿಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು' ಎಂದು ಅವರು ಭರವಸೆ ನೀಡಿದರು.

ದೇವಸ್ಥಾನಗಳ ಸ್ವಚ್ಛತೆಗೆ ಆದ್ಯತೆ: ‘ದೇವಸ್ಥಾನಗಳ  ಸ್ವಚ್ಛತೆಯನ್ನು ಕಾಪಾಡಲು ಆದ್ಯತೆ ನೀಡಬೇಕು. ದೇವಸ್ಥಾನಗಳ ಆವರಣಗಳ ವಾತಾವರಣ ಕಲುಷಿತಗೊಳ್ಳದಂತೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಅವರು ಇದೇ ವೇಳೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಎಸ್.ಎ. ರಾಮದಾಸ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X