ಪೋಕ್ಸೊ ಪ್ರಕರಣದ ಆರೋಪಿಗಳಿಗೆ ಜಾಮೀನು: ಸಂತ್ರಸ್ತರಿಗೆ ನೋಟಿಸ್ ನಿರ್ದೇಶನ ಕೋರಿ ಪಿಐಎಲ್

ಬೆಂಗಳೂರು, ಫೆ.24: ಪೋಕ್ಸೊ ಪ್ರಕರಣದ ಆರೋಪಿಗಳು ಜಾಮೀನು ಮಂಜೂರು ಕೋರಿ ಕೋರ್ಟ್‍ಗಳಿಗೆ ಸಲ್ಲಿಸುವ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವ ಮೊದಲು ಕಡ್ಡಾಯವಾಗಿ ಸಂತ್ರಸ್ತರಿಗೆ ನೋಟಿಸ್ ನೀಡಲು ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ನಗರದ ಬೀಬಿ ಆಯೆಷಾ ಖಾನುಂ ಹಾಗೂ ಇತರರು ಸಲ್ಲಿಸಿರುವ ಪಿಐಎಲ್‍ಯನ್ನು ಹೈಕೋರ್ಟ್ ವಿಭಾಗೀಯ ಪೀಠ, ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಕಾನೂನು ಮತ್ತು ನ್ಯಾಯ ಸಚಿವಾಲಯ, ರಾಜ್ಯ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರ ವಕೀಲ ರೋಹನ್ ಕೊಠಾರಿ ವಾದ ಮಂಡಿಸಿದರು.
Next Story





