ಫೆ.27ಕ್ಕೆ ಪತ್ರಕರ್ತರ ರಾಜ್ಯ ಸಂಘದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಉಡುಪಿ, ಫೆ.24: ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ರಾಜ್ಯ ಸಂಘದ ಉಪಾಧ್ಯಕ್ಷ ಮೂರು ಸ್ಥಾನಗಳಿಗೆ ಫೆ.27ರಂದು ಬೆಳಗ್ಗೆ 10ರಿಂದ ಅಪರಾಹ್ನ 3ಗಂಟೆಯವರೆಗೆ ಉಡುಪಿ ಪತ್ರಿಕಾ ಭವನದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮತದಾನ ನಡೆಯಲಿದೆ.
ಜಿಲ್ಲಾ ಪತ್ರಕರ್ತರ ಸಂಘದ ಎಲ್ಲಾ ಅರ್ಹ ಮತದಾರರು ತಮ್ಮ ಸದಸ್ಯತ್ವದ ಗುರುತಿನ ಚೀಟಿಯೊಂದಿಗೆ ಬಂದು ಮತ ಚಲಾಯಿಸುವಂತೆ ಕೋರಲಾಗಿದೆ. ರಾಜ್ಯ ಸಂಘದ ಉಪಾಧ್ಯಕ್ಷ ಸ್ಥಾನಕ್ಕೆ ಕಣದಲ್ಲಿರುವ ಅಭ್ಯರ್ಥಿಗಳ ವಿವರ: ಅಜ್ಜಮಾಡ ರಮೇಶ್‌ಕುಟ್ಟಪ್ಪ, ಬಂಗ್ಲೆ ಮಲ್ಲಿಕಾರ್ಜುನ, ಭವಾನಿಸಿಂಗ್ ಠಾಕೂರ, ಪುಂಡಲೀಕ.ಭೀ.ಬಾಳೋಜಿ.
Next Story