Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಡುಬಡತನದಲ್ಲಿರುವ ಅಲ್ಪಸಂಖ್ಯಾತರ ಕೆಲ...

ಕಡುಬಡತನದಲ್ಲಿರುವ ಅಲ್ಪಸಂಖ್ಯಾತರ ಕೆಲ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ25 Feb 2022 3:42 PM IST
share
ಕಡುಬಡತನದಲ್ಲಿರುವ ಅಲ್ಪಸಂಖ್ಯಾತರ ಕೆಲ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು, ಫೆ.25: ಅಲಸಂಖ್ಯಾತರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಸಾಮಾಜಿಕ ನ್ಯಾಯದ ಜೊತೆ ಸಾಮಾಜಿಕ ಅಭಿವೃದ್ಧಿಯ ಗುರಿ ಸಾಧಿಸಲಾಗುವುದು. ಅಲ್ಪಸಂಖ್ಯಾತರ ಕೆಲ ಸಮುದಾಯಗಳು ಕಡುಬಡತನದಲಿದ್ದು, ಅವರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 ಅವರು ಇಂದು  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್ ಕಲಾಂ ಆಝಾದ್ ಭವನವನ್ನು ಉದ್ಘಾಟಿಸಿದ ಬಳಿಕ ಮಾತನಾಡುತ್ತಿದ್ದರು.

ಬದಲಾವಣೆಯ ಯುಗದಲ್ಲಿ ಬದಲಾವಣೆಯ ವೇಗವನ್ನು ಅಳವಡಿಸಿಕೊಂಡು ಅಲ್ಪಸಂಖ್ಯಾತರು ಗುರಿಯನ್ನು ಸಾಧಿಸಬೇಕು ಹಾಗೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. 21ನೇ ಶತಮಾನ ಜ್ಞಾನದ ಶತಮಾನವಾಗಿದ್ದು, ಜಗತ್ತು ಬದಲಾವಣೆಯ ರೀತಿಯನ್ನು ಗ್ರಹಿಸಿ , ಮಕ್ಕಳನ್ನು ಸಿದ್ಧಪಡಿಸಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ  ಸರಕಾರ ಹಾಗೂ ಸಮಾಜ ಮಕ್ಕಳಿಗೆ ಸೂಕ್ತ ಅವಕಾಶಗಳನ್ನು ಹಾಗೂ ಸವಲತ್ತುಗಳನ್ನು ಕಲ್ಪಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕರಿಸಬೇಕು ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಮಕ್ಕಳಿಗೆ ಶಿಕ್ಷಣ, ವೃತ್ತಿ ಮಾರ್ಗದರ್ಶನ:

ಅಲ್ಪಸಂಖ್ಯಾತ ಜನಾಂಗದ ಕಟ್ಟಕಡೆಯ ವ್ಯಕ್ತಿಯನ್ನು ಬಡವರನ್ನು ಗಮನದಲ್ಲಿರಿಸಿ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲ ಕಾರ್ಯಕ್ರಮಗಳಿರಬೇಕು. ಮಕ್ಕಳು ಮಾನವ ಶಕ್ತಿ. ಪುಸ್ತಕ ಹಿಡಿಯುವ ಚಿಕ್ಕಮಕ್ಕಳ ಕೈಯಲ್ಲಿ ಭಾರದ ಮೂಟೆಗಳಿವೆ. ಉದ್ಯೋಗ ಬಗ್ಗೆ ಮಕ್ಕಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ಹೆಚ್ಚಿನ ಮಾಹಿತಿ ದೊರೆಯಬೇಕು. ಪ್ರಮುಖವಾಗಿ 8, 9, 10 ತರಗತಿಯ ವಿದ್ಯಾರ್ಥಿಗಳಿಗೆ ವೃತ್ತಿಗಳ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ, ಮಕ್ಕಳಿಗೆ ಐಟಿ, ಇಂಜಿನಿಯರಿಂಗ್, ಐಟಿಐ, ಐಎಎಸ್, ಐಪಿಎಸ್ ಸೇರಿದಂತೆ ಮುಂತಾದ ಕ್ಷೇತ್ರದಲ್ಲಿನ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಬೇಕು.  ಅಲ್ಪಸಂಖ್ಯಾತ ಮಕ್ಕಳ ಚಿಂತನೆ ಅವರ ಶಿಕ್ಷಣ ಹಾಗೂ ವೃತ್ತಿಯ ದಿಸೆಯಲ್ಲಿ ಇರಬೇಕು. ಅಲ್ಪಸಂಖ್ಯಾತರ ಹಾಗೂ ಬಡವರ ಮಕ್ಕಳು ಸೂಕ್ತ ವೃತ್ತಿ ಮಾರ್ಗದರ್ಶನದಿಂದ ಉತ್ತಮ ಶಿಕ್ಷಣ ಹಾಗೂ ಉದ್ಯೋಗ ಪಡೆದು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗುವ ಜೊತೆಗೆ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗುತ್ತದೆ ಎಂದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ :

ಮಕ್ಕಳ ವಿದ್ಯಾರ್ಜನೆ ವಿಚಾರದಲ್ಲಿ ಬಹಳ ಮುಕ್ತ ವಾತಾವರಣ ನಿರ್ಮಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಅವಕಾಶ ಕಲ್ಪಿಸುತ್ತದೆ. ಪ್ರಧಾನಿಯವರ ನೇತೃತ್ವದಲ್ಲಿ ನವಭಾರತದ ನಿರ್ಮಾಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬಹಳಷ್ಟು ಅಧ್ಯಯನ ಮಾಡಿ ಜಾರಿಗೆ ತರಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭವನ್ನು ಅಲ್ಪಸಂಖ್ಯಾತರೂ ಪಡೆಯಬೇಕು ಎಂದರು.

ವಕ್ಫ್ ಆಸ್ತಿ ವಕ್ಫ್ ಸಮಾಜಕ್ಕೆ ಬಳಕೆ :

ವಕ್ಫ್ ಆಸ್ತಿಯನ್ನು ಕಾಪಾಡಿಕೊಳ್ಳಲು ವಕ್ಫ್ ಮಂಡಳಿಗೆ ಅಧಿಕಾರ ನೀಡಲಾಗಿದೆ. ಇದರ ದುರುಪಯೋಗ ಆಗದಂತೆ ಕ್ರಮ ವಹಿಸಬೇಕು. ವಕ್ಫ್ ಸಮಾಜದ ಆಸ್ತಿಯನ್ನು ಸಮಾಜದ ಬಳಕೆಗಾಗಿ ಮೀಸಲಿಡಬೇಕು. ಈ ವಿಷಯದಲ್ಲಿ ಕಾನೂನುಬಾಹಿರವಾಗಿ ನಡೆದುಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X