ಉಡುಪಿ: ಯುವತಿ ನಾಪತ್ತೆ

ಉಡುಪಿ, ಫೆ.25: ಉಡುಪಿ ತಾಲೂಕು ಕಿದಿಯೂರು ಗ್ರಾಮದ ನಿವಾಸಿ ಏಕತಾ ವರ್ಮಾ (23) ಎಂಬ ಯುವತಿಯು ಫೆ.21ರಂದು ಅಪರಾಹ್ನ 1:30ರ ಸುಮಾರಿಗೆ ಮಣಿಪಾಲಕ್ಕೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ಸಂಖ್ಯೆ:9480805447 ಹಾಗೂ ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸುವಂತೆ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





