ಪ್ರಚೋದನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ಫೆ.25: ಪ್ರಚೋದನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗರಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಮಾಜದ ಸ್ವಾಸ್ಥ್ಯ ಕದಡುವಂತಹ ಪ್ರಚೋದನಕಾರಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಾಡುವುದು ತಪ್ಪು. ಈ ರೀತಿ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದಾರೆ.
Next Story





