ಫೆ.28ರಂದು ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿಗೆ

ಮಂಗಳೂರು, ಫೆ.26: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ.28ರಂದು ಅಪರಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಸಂಜೆ 3:45ಕ್ಕೆ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ 4:30ಕ್ಕೆ ನಗರದ ಕುಲಶೇಖರ ಕಾರ್ಡೆಲ್ ಸಭಾಂಗಣದಲ್ಲಿ ನಡೆಯುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಕೂಡ ಪಾಲ್ಗೊಳ್ಳಲಿದ್ದಾರೆ.
ಸಂಜೆ 6ಕ್ಕೆ ನಗರದ ಓಶಿಯನ್ ಪರ್ಲ್ ಹೊಟೇಲಿನಲ್ಲಿ ನಡೆಯುವ ಕೆಸಿಸಿಐ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ 7:30ಕ್ಕೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story