Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ ಅಂಬರೀಶ್ ಸ್ಮಾರಕಕ್ಕೆ ಮುಖ್ಯಮಂತ್ರಿ...

ನಟ ಅಂಬರೀಶ್ ಸ್ಮಾರಕಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ27 Feb 2022 5:41 PM IST
share
ನಟ ಅಂಬರೀಶ್ ಸ್ಮಾರಕಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

ಬೆಂಗಳೂರು, ಫೆ. 27: ‘ಕರ್ನಾಟಕ ಮಾತ್ರವಲ್ಲದೆ, ಸುತ್ತಮುತ್ತಲಿನ ರಾಜ್ಯಗಳ ಜನರೂ ಬಂದು ನೋಡುವಂಥ ಉತ್ತಮ ಸ್ಮಾರಕ ನಿರ್ಮಾಣವಾಗಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ರವಿವಾರ ಇಲ್ಲಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಅಂಬರೀಶ್ ಅವರನ್ನು ಯಾವಾಗಲೂ ಅಂಬರೀಶ್ ಎಂದೇ ಸಂಬೋಧಿಸುತ್ತಿದ್ದೆ. ಈಗಲೂ ಹಾಗೆಯೇ ಕರೆಯುತ್ತೇನೆ. ನಮ್ಮದು 40 ವರ್ಷಗಳಿಗೂ ಮಿಗಿಲಾದ ಸ್ನೇಹ. ಒಟ್ಟಿಗೆ ಓಡಾಡಿ, ಸಮಯ ಕಳೆದಿದ್ದೇವೆ. ಊಟ ಮಾಡಿದ್ದೇವೆ.  ಕರ್ನಾಟಕದಾದ್ಯಂತ ಸುತ್ತಿದ್ದೇವೆ. ಮಾಡಬಹುದಾದ್ದನ್ನು ಮಾಡಬಾರದ್ದನ್ನು ಮಾಡಿದ್ದೇವೆ’ ಎಂದು ಅಂಬರೀಶ್ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದರು.

‘ಅಂಬರೀಶ್ ತೆರೆದ ಪುಸ್ತಕವಿದ್ದಂತೆ. ಯಾವುದನ್ನೂ ಮುಚ್ಚಿಡುತ್ತಿರಲಿಲ್ಲ. ಯಾರು ತಮ್ಮ ಮನದಾಳದ ಇಚ್ಛೆಯಂತೆ ಜೀವನ ನಡೆಸಲು ಸಾಧ್ಯವಾಗುತ್ತದೆಯೋ ಅವರು ನಿಜವಾದ ಧೀರ. ಹಲವಾರು ನಾಯಕÀರನ್ನು ನೋಡಿದ್ದೇವೆ. ನಮ್ಮ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವುದು ಎಷ್ಟು ಕಷ್ಟಸಾಧ್ಯವೆಂದು ಎಲ್ಲರಿಗೂ ಗೊತ್ತಿದೆ. ಆದರೆ ಅಂಬರೀಶ್ ಮಾತ್ರ ಏನೇ ಬಂದರೂ ಆತ್ಮಸಾಕ್ಷಿಗೆ ವಿರುದ್ಧವಾಗಿ ಒಂದು ದಿನವೂ ಬದುಕಲಿಲ್ಲ. 

ತನ್ನ ಸ್ವಂತ ಇಚ್ಚಾಶಕ್ತಿಯ ಮೇಲೆ ಬದುಕಿದಂತಹ ಒಬ್ಬ ಮೇರು ನಟ ಅಂಬರೀಶ್. ಇದು ದೈವದತ್ತ ಕೊಡುಗೆ. ಅತ್ಯಂತ ಆತ್ಮೀಯ. ಅವನ ಬಾಯಲ್ಲಿ ‘ಲೇ' ಎಂದು ಕರೆಸಿಕೊಳ್ಳುವ ಬಯಕೆ ಅವರ ಸ್ನೇಹಿತರಲ್ಲಿತ್ತು. ಅವರು ಗೌರವ ನೀಡಿ ಮಾತನಾಡಿದರೆ ಆ ವ್ಯಕ್ತಿ ಆತ್ಮೀಯರಲ್ಲವೆಂದು ಅನಿಸುತ್ತಿತ್ತು. ಬಾಲ್ಯ, ಚಿತ್ರರಂಗ, ರಾಜಕೀಯದಲ್ಲಿಯೂ ಹಾಗೆಯೇ ಇದ್ದವರು. ಹುಟ್ಟಿನಿಂದ ನಾಯಕತ್ವದ ಗುಣಗಳು ಅವರಲ್ಲಿತ್ತು. ಸಿನಿಮಾದಲ್ಲಿ ಖಳನಾಯಕನ ಪಾತ್ರ ಮಾಡಿದರೂ, ನಾಯಕನ ಪಾತ್ರ ಅವರಿಗೆ ಶೋಭೆಯನ್ನು ತಂದುಕೊಟ್ಟಿತು ಎಂದು ನೆನಪು ಮಾಡಿಕೊಂಡರು.

ಸ್ನೇಹ ಜೀವಿ: ‘ಸ್ನೇಹಕ್ಕೆ ಬಹಳ ಬೆಲೆ ನೀಡಿ, ಅದಕ್ಕಾಗಿ ಏನು ಬೇಕಾದರೂ ಮಾಡುತ್ತಿದ್ದ ವ್ಯಕ್ತಿ ಅವರು. ಬೆಂಗಳೂರಿನಲ್ಲಿ ಶೂಟಿಂಗ್ ಮಾಡುವಾಗ ನಾಲ್ಕೈದು ಜನ ಸ್ನೇಹಿತರು ಕಾರಿನ ಹಾರ್ನ್ ಹೊಡೆದರೆ ಸಾಕು ಹೇಗಿದ್ದರೂ ಬಿಟ್ಟು ಬರುತ್ತಿದ್ದರು. ನಿರ್ಮಾಪಕರು ಮನೆಗೆ ಬಂದು ಚಿತ್ರೀಕರಣದ ವೇಳೆ ದಯಮಾಡಿ ಬರಬೇಡಿ ಎಂದು ಹೇಳಿ ಹೋದ ಪ್ರಸಂಗವನ್ನು ಸಿಎಂ ಸ್ಮರಿಸಿದರು. 

ಅಧಿಕಾರ ಧಿಕ್ಕರಿಸಿ ರಾಜಕಾರಣ: ‘ಬಡವರಿಗೆ, ರೈತರಿಗಾಗಿ ಹೃದಯ ಮಿಡಿಯುತ್ತಿತ್ತು. ಕರ್ನಾಟಕವನ್ನು ಉನ್ನತ  ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ತುಡಿತ ಅವರಲ್ಲಿತ್ತು. ಆದರೆ ಅಂಬರೀಶನಿಗೆ ಅಧಿಕಾರಕ್ಕೆ ಅಂಟಿಕೊಳ್ಳುವ ಗುಣವಿರಲಿಲ್ಲ. ಅಧಿಕಾರವಿರಲಿ, ಇಲ್ಲದಿರಲಿ ಅದನ್ನು ಧಿಕ್ಕರಿಸಿಯೇ ರಾಜಕಾರಣ ಮಾಡಿದವರು. ಅಂತಹ ವ್ಯಕ್ತಿ ಗಳು ಬಹಳ ಕಡಿಮೆ. ಕೇಂದ್ರ ಸಚಿವರಿದ್ದಾಗ ಕಾವೇರಿ ವಿವಾದ ಎದುರಾದಾಗ ಒಂದು ಕ್ಷಣವೆಯೂ ಯೋಚಿಸದೆ, ಅವರು ರಾಜಿನಾಮೆಯನ್ನು ಬಿಸಾಡಿ ಬಂದವರು. ಕಾವೇರಿ ಹೋರಾಟದಲ್ಲಿ ಅಧಿಕಾರ ತ್ಯಾಗ ಮಾಡಿದ್ದು ಅಂಬರೀಶ್ ಮಾತ್ರ ಎಂದರು. 

ಮಂಡ್ಯ ಪ್ರೀತಿ: ‘ಮಂಡ್ಯ ಅಂದರೆ ಅವರಿಗೆ ಪಂಚಪ್ರಾಣ. ಮಂಡ್ಯದವರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಮಾತನಾಡಿಸಿ ಪರಿಹಾರ ಕಲ್ಪಿಸುತ್ತಿದ್ದರು. ಅವರಿದ್ದಲ್ಲಿ ಜೀವಂತಿಕೆ ಇರುತ್ತಿತ್ತು. ವಿದ್ಯುತ್ ಸಂಚಾರವಾದಂಥ ಪರಿಣಾಮ ಇರುತ್ತಿತ್ತು ಎಂದು ಅವರು ತಿಳಿಸಿದರು. 

‘ಅವರು ಇನ್ನಷ್ಟು ಕಾಲ ನಮ್ಮೊಡನೆ ಇರಬೇಕಿತ್ತು.  ಕನ್ನಡ ಚಿತ್ರರಂಗದ ಹೆಸರನ್ನು  ಇತರೆ ರಾಜ್ಯದಲ್ಲಿಯೂ ಅಭಿಮಾನಪೂರ್ವಕವಾಗಿ ತೆಗೆಡಿಕೊಳ್ಳುವಂತೆ ಮಾಡಿದ್ದರು. ಅಜಾತಶತ್ರು ಎಂದು ಅವರನ್ನು ಕರೆಯಲಾಗುತ್ತಿತ್ತು.  ಯಾರೊಂದಿಗೂ ದ್ವೇಷ ಸಾಧಿಸುತ್ತಿರಲಿಲ್ಲ.  ಅವರನ್ನು ಕಾಣಲು 5ಲಕ್ಷ ಕ್ಕಿಂತಲೂ ಹೆಚ್ಚು ಜನ ಬಿಜಾಪುರದಲ್ಲಿ ಸೇರಿದ್ದರು ಎಂದು ನೆನೆಸಿಕೊಂಡ ಸಿಎಂ, ಅವರು ಯಾವುದೇ ತರಬೇತಿ ಇಲ್ಲದೆ ಅಲ್ಲೆ ಮಾಡಿ ತೋರಿಸುವ ನೈಜ ನಟನೆ ಇತ್ತು. ಅತ್ಯಂತ ಗಟ್ಟಿಯಾದ ಬಾಳ ಸಂಗಾತಿ ಸುಮಲತಾ. ಅವರದ್ದು ಅನ್ಯೋನ್ಯ ದಾಂಪತ್ಯ. ಅಂಬರೀಶ್ ಅವರ ಗುಣಧರ್ಮಗಳನ್ನು ಸುಮಲತಾ ಅವರು ರೂಢಿಸಿಕೊಂಡಿದ್ದಾರೆ. ಅವರ ಪುತ್ರ ಅಭಿμÉೀಕ್ ಸಹ ಅವರ ತಂದೆಯ ಗುಣಗಳನ್ನು ಪಡೆದು ಆದಷ್ಟು ಬೇಗ ಮತ್ತೊಮ್ಮೆ ಅಂಬರೀಶ್ ಅವರನ್ನು ಪರಿಚಯಿಸುತ್ತಾರೆ ಎಂಬ ನಿರೀಕ್ಷೆ ಇದೆ ಎಂದರು. ಕಲಾರಂಗಕ್ಕೆ ಉತ್ತಮ ಸೇವೆ ದೊರಕಬೇಕು. 

ಪುನೀತ್ ಸ್ಮಾರಕ: ಡಾ: ರಾಜ್ ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್, ಪುನೀತ್ ರಾಜ್ ಕುಮಾರ್, ಮೇರು ನಟರನ್ನು ನಾಡು ಕಳೆದುಕೊಂಡಿದೆ. ಪುನೀತ್ ಅವರ ಸ್ಮಾರಕವನ್ನು ಸದ್ಯದಲ್ಲಿಯೇ ನಿರ್ಮಿಸಲಾಗುವುದು ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ದಿನಾಂಕವನ್ನೂ ಘೋಷಿಸಲಾಗುವುದು ಎಂದರು. ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಸಣ್ಣ ಕೃತಜ್ಞತೆ ಹೇಳುವ ಭಾಗ್ಯ ನನಗೆ ದೊರೆತಿದೆ. ಅವರು ಎಲ್ಲೇ ಇದ್ದರೂ ಅವರು ನಮ್ಮನ್ನು ನೆನೆಸಿಕೊಳ್ಳುತ್ತಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X