ಮಂಗಳೂರು: ಮಾ.3ರಂದು ಉದ್ಯೋಗ ಮೇಳ

ಸಂಗ್ರಹ ಚಿತ್ರ
ಮಂಗಳೂರು, ಫೆ.27: ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ದ.ಕ.ಜಿಲ್ಲಾಡಳಿತದ ಸಹಯೋಗದಲ್ಲಿ ಮಾ.3ರ ಬೆಳಗ್ಗೆ 9ರಿಂದ 5ರವರೆಗೆ ನಗರದ ಎಜೆ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಟೀಮ್ ಲೀಸ್, ಸಿನೋಪ್ ಟೆಕ್, ಎಚ್ಜಿಎಸ್, ಬಿಒಎಸ್ ಸಿಎಚ್, ಬೈಜೂಸ್, ಟಾಟಾ ಕಮ್ಯುನಿಕೇಶನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್ಟಿಟಿಎಫ್ ಸಹಿತ 100ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುತ್ತಿವೆ.
ಬಿಎ, ಬಿಎಸ್ಸಿ, ಬಿಕಾಂ, ಐಟಿಐ, ಡಿಪ್ಲೊಮಾ ಬಿಇ ಹಾಗು ಇತರ ಪದವಿ ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ಪೋರ್ಟ್ ಫೋಟೊ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.
Next Story