ಹೂಡೆಯ ಸಾಲಿಹಾತ್ ಕಾಲೇಜಿನಲ್ಲಿ ಆರೋಗ್ಯ ಮಾಹಿತಿ ಶಿಬಿರ

ಉಡುಪಿ, ಫೆ.27: ತೋನ್ಸೆ ಹೂಡೆಯ ಸಾಲಿಹಾತ್ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಳಿಗಾಗಿ ಆರೋಗ್ಯ ಮಾಹಿತಿ ಶಿಬಿರವನ್ನು ಜೇಸಿಸಿಟಿ ಉಡುಪಿ ಪ್ರಾಯೋಜಕತ್ವದಲ್ಲಿ ಇತ್ತೀಚೆಗೆ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸ್ಥಳೀಯ ಹೂಡೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರೇಮಾ, ಕುಷ್ಠರೋಗದ ಲಕ್ಷಣಗಳು ಹಾಗೂ ಗುಣಪಡಿಸುವ ವಿಧಾನದ ಕುರಿತಾಗಿ ವಿವರಿಸಿದರು.
ಅಧ್ಯಕ್ಷತೆಯನ್ನು ಉಡುಪಿ ಸಿಟಿ ಜೇಸಿಯ ಅಧ್ಯಕ್ಷ ಡಾ.ವಿಜಯ ವಹಿಸಿದ್ದರು. ವೇದಿಕೆಯಲ್ಲಿ ಸಾಲಿಹಾತ್ ಪದವಿ ಕಾಲೇಜಿನ ಪ್ರಾಂಶುಪಾಲ ಅಸ್ಲಂ ಹೈಕಾಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ದಿವ್ಯಾ ಪೈ ಹಾಗೂ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ಮೊದಲಾದವರು ಉಪಸ್ಥಿತರಿ ದ್ದರು. ಡಾ.ಚಿತ್ರ ವಂದಿಸಿದರು.
Next Story





