Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಗೆ...

ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಗೆ ಹುಟ್ಟೂರ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ27 Feb 2022 10:25 PM IST
share
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಗೆ ಹುಟ್ಟೂರ ಸನ್ಮಾನ

ಕುಂದಾಪುರ, ಫೆ.27: ವಕ್ವಾಡಿ ಪ್ರವೀಣ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಹುಟ್ಟೂರಿನ ಅಭಿನಂದನಾ ಸಮಾರಂಭವನ್ನು ವಕ್ವಾಡಿ ಫಾರ್ಚೂನ್ ವಿಲೇಜ್ ಹೊಟೇಲ್ ಬಳಿ ರವಿವಾರ ಹಮ್ಮಿಕೊಳ್ಳಲಾಗಿತ್ತು.

ಸುಬ್ರಮಣ್ಯ ಮಠಾಧೀಶ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಬದುಕಿಗೆ ಅರ್ಥವನ್ನು ಹುಡುಕುತ್ತಾ ಹೋದಾಗ ಪರವೂರಿನಲ್ಲಿ ನೆಲೆಸಿ ಊರಿಗೂ ಉಪಕಾರಿಯಾಗಿ ಸಾರ್ಥಕತೆ ಪಡೆದ ವ್ಯಕ್ತಿಗೆ ಹುಟ್ಟೂರಿನಲ್ಲಿಯೇ ಅಭಿನಂದಿಸುವ ಈ ಕಾರ್ಯಕ್ರಮ ಶ್ಲಾಘನೀಯ. ಉಸಿರಾಡುವಿಕೆಯೇ, ಸುಖಾ ನುಭವ ಬದುಕಲ್ಲ. ತನ್ನ ಸಾಮಾಜಿಕ, ಆದ್ಯಾತ್ಮಿಕತೆಯೇ ಬದುಕು. ಜೀವನದಲ್ಲಿ ಅತ್ಯಂತ ಎತ್ತರದಲ್ಲಿರುವುದು ಭಗವಂತ. ಅಸಾಧಾರಣ ಸಾಧನೆ ಮಾಡಿದವರಿಗೆ ಸನ್ಮಾನ ನೀಡಲೇಬೇಕಾಗಿರುವುದು ಅಗತ್ಯ ಎಂದರು.

ಪ್ರವೀಣ್ ಶೆಟ್ಟಿ, ಪ್ರಸಾದ್ ನೇತ್ರಾಲಯಕ್ಕೆ ಕೊಡುಗೆಯಾಗಿ ನೀಡಿದ ಅಂಬುಲೆನ್ಸ್ ವಾಹನದ ಕಿಲಿಕೈಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹಸ್ತಾಂತರಿಸಿದರು. ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ 17 ಮಂದಿ ಅಶಕ್ತರಿಗೆ ವೈದ್ಯಕೀಯ ನೆರವಿನ ಸಹಾಯಧನ ವಿತರಿಸಲಾಯಿತು. ವಕ್ವಾಡಿ ಶಾಲೆಯ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸ ಲಾಯಿತು.

ಸಮಿತಿ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ಶಾಸಕರಾದ ರಘುಪತಿ ಭಟ್, ಸುಕುಮಾರ ಶೆಟ್ಟಿ, ಡಾ.ವೈ ಭರತ್ ಶೆಟ್ಟಿ, ಮಂಜುನಾಥ ಭಂಡಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹಿರಿಯ ಸಂಪಾದಕ ವಿಶ್ವೇಶ್ವರ ಭಟ್, ಉದ್ಯಮಿ ಕೆ.ನಾಗರಾಜ್, ಯುಎಇ ಕನ್ನಡಿಗಾಸ್ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಶ್ರೀನಿವಾಸ್, ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯ ಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್, ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್, ರೂಪಾಲಿ ಪ್ರವೀಣ್ ಕುಮಾರ್ ಶೆಟ್ಟಿ, ಜಿ.ಪಿ.ಶೆಟ್ಟಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ನಟ-ನಿರ್ದೇಶಕ ರಿಷಬ್ ಶೆಟ್ಟಿ, ನಟಿ ಹರಿಪ್ರಿಯಾ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ರಾಮಕೃಷ್ಣ ಕಾಲೇಜು ಪ್ರಾಂಶುಪಾಲ ಎಂ.ಬಾಲಕೃಷ್ಣ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಸಮಿತಿ ಕಾರ್ಯದರ್ಶಿ ವೇಣುಗೋಪಾಲ ಹೆಗ್ಡೆ ಸ್ವಾಗತಿಸಿದರು. ದಿನಕರ್ ಆರ್.ಶೆಟ್ಟಿ ಪ್ರಸ್ತಾವಿಸಿದರು. ಪತ್ರಕರ್ತ ಕೆ.ಸಿ ರಾಜೇಶ್ ಹಾಗೂ ಮಹೇಶ್ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X