'ನಮ್ಮ ಅಬ್ಬಕ್ಕ - 2022 ಅಮೃತ ಸ್ವಾತಂತ್ರ್ಯ ಸಂಭ್ರಮ' ಕಾರ್ಯಕ್ರಮ ಸಂಪನ್ನ

ಮಂಗಳೂರು, ಫೆ.27: ಮಂಗಳೂರು ಮಹಾನಗರ ಪಾಲಿಕೆ ಮತ್ತು ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ನಗರದ ಪುರಭವನದಲ್ಲಿ ನಡೆಯುತ್ತಿದ್ದ ನಮ್ಮ ಅಬ್ಬಕ್ಕ - 2022 ಅಮೃತ ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮವು ರವಿವಾರ ಸಂಪನ್ನಗೊಂಡಿತು.
ಈ ಸಂದರ್ಭ ನಮ್ಮ ಅಬ್ಬಕ್ಕ ಅಮೃತ ಸ್ವಾತಂತ್ರೋತ್ಸವ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಹಾಗೂ ರಾಣಿ ಅಬ್ಬಕ್ಕ ಸೇವಾ ಪುರಸ್ಕಾರವನ್ನು ವಿಜಯಲಕ್ಷ್ಮಿ ಶೆಟ್ಟಿಗೆ ಪ್ರದಾನ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ರಾಜ್ಯಅಲೆಮಾರಿ - ಅರೆಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು,ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಉಪಸ್ಥಿತರಿದ್ದರು.
ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಯನಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Next Story





