ನಟ ರವಿಚಂದ್ರನ್ ರ ತಾಯಿ ನಿಧನ

ಬೆಂಗಳೂರು, ಫೆ.28: ಕನ್ನಡದ ಖ್ಯಾತ ಚಿತ್ರನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ(83) ಸೋಮವಾರ ಬೆಳಗ್ಗೆ 6:30ರ ಸುಮಾರಿಗೆ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರಿಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.
ರವಿಚಂದ್ರನ್ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧುವರ್ಗವನ್ನು ಪಟ್ಟಮ್ಮಲ್ ವೀರಸ್ವಾಮಿ ಅಗಲಿದ್ದಾರೆ.
Next Story





