ಕಾರು ಢಿಕ್ಕಿ ಪ್ರಕರಣ: ಬಂಧನಕ್ಕೊಳಗಾಗಿ ಜಾಮೀನು ಪಡೆದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ರವಿವಾರ ಮಧ್ಯಾಹ್ನ ಮುಂಬೈನ ಬಾಂದ್ರಾದಲ್ಲಿರುವ ತಮ್ಮ ವಸತಿ ಸೊಸೈಟಿಯ ಗೇಟ್‌ಗೆ ಕಾರನ್ನು ಡಿಕ್ಕಿ ಹೊಡೆದಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆಯ ನಂತರ ಕಾಂಪ್ಲೆಕ್ಸ್‌ನ ವಾಚ್‌ಮ್ಯಾನ್ ಹಾಗೂ ಕೆಲವು ನಿವಾಸಿಗಳೊಂದಿಗೆ ವಾಗ್ವಾದ ನಡೆಸಿದ ಕಾಂಬ್ಳಿಯವರನ್ನು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಅಧಿಕಾರಿ ತಿಳಿಸಿದರು.
ಕಾಂಬ್ಳಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 279 (ಅತಿವೇಗದ ಚಾಲನೆ), 336 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯ) ಹಾಗೂ 427 (ಹಾನಿ ಉಂಟುಮಾಡುವ ಕಿಡಿಗೇಡಿತನ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಬಾಂದ್ರಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
Next Story





