ಉಳ್ಳಾಲ ಉರೂಸ್ ಪ್ರಯುಕ್ತ ಕಾರ್ಯಕ್ರಮ
ಮಂಗಳೂರು : ಉಳ್ಳಾಲ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಮಂಗಳವಾರ ಮಗ್ರಿಬ್ ನಮಾಝ್ ಬಳಿಕ ವಲಿಯುದ್ದೀನ್ ಫೈಝಿ ( ನೂರೇ ಅಜ್ಮೀರ್) ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಕೆ.ಪಿ.ಇರ್ಶಾದ್ ಹುಸೈನ್ ದಾರಿಮಿ ಅಲ್ ಅಝ್ ಹರಿಮಿತ್ತಬೈಲ್ ಸಹಿತ ಹಲವು ಧಾರ್ಮಿಕ ಮತ್ತು ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ.
ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ರವರ ಅಧ್ಯಕ್ಷ ತೆಯಲ್ಲಿ ನಡೆಯುವ ಈ ಸಭೆಯಲ್ಲಿ ಪದ್ಮ ಶ್ರೀ ಪ್ರಶಸ್ತಿ ವಿಜೇತ ಹಾಜಬ್ಬ ಹರೇಕಳ ಮತ್ತು ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ದಯಾನಂದ ಬಿ ಅವರನ್ನು ಅಭಿನಂದಿಸಲಾಗುವುದು ಎಂದು ಮಾಧ್ಯಮ ಉಸ್ತುವಾರಿ ಫಾರೂಕ್ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story