ಸರಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಮನವಿ

ಉಡುಪಿ, ಮಾ.1: ಸರಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ಹೊರಗುತ್ತಿಗೆ ನೌಕರರಿಗೆ ಸ್ಥಗಿತಗೊಂಡಿರುವ ಕಳೆದ ಮೂರು ತಿಂಗಳ ವೇತನವನ್ನು ಬಿಡುಗಡೆ ಮಾಡಬೇಕು ಮತ್ತು ಭವಿಷ್ಯನಿಧಿ ಖಾತೆಗೆ ಗುತ್ತಿಗೆದಾರರ ಪಾಲಿನ ಹಣ ಕಟ್ಟದಿರುವ ಮತ್ತು ಇಎಸ್ಐ ಸಮಸ್ಯೆ ಬಗೆಹರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಮನವಿ ಸ್ವೀಕರಿಸಿದ ಡಿಸಿ, ಈ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಕೋಣಿ, ಮುಖಂಡರಾದ ಪ್ರಮೋಧಿನಿ ಮಣಿಪಾಲ, ಮಂಜುಳ ಕಿನ್ನಿಮೂಲ್ಕಿ, ವಿನಂತಿ ಕಿನ್ನಿಮುಲ್ಕಿ, ಶಕುಂತಳ ಮಣಿಪಾಲ, ಅಶ್ವಿನಿ ಮಣಿಪಾಲ, ರೇಖಾ ಆದಿ ಉಡುಪಿ ಮೊದಲಾದವರು ಉಪಸ್ಥಿತರಿದ್ದರು.
Next Story