ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಮಣಿಪಾಲ, ಮಾ.1: ಅನಂತನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೇರಳ ಮೂಲದ ವಿದ್ಯಾರ್ಥಿ ಮೊಹಮ್ಮದ್ ನಿಹಾಲ್ ಎಂಬವರು ವೈಯಕ್ತಿಕ ಸಮಸ್ಯೆಯಿಂದ ಮನನೊಂದ ಫೆ.27ರಂದು ರಾತ್ರಿ ವೇಳೆ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಅಕ್ಕಣಿ ಪೂಜಾರ್ತಿ(70) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.28ರಂದು ಸಂಜೆ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಶಿವಪುರದ ಕೊಳಗುಡ್ಡೆಯ ಉದಯ ನಾಯ್ಕ್(52) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.1ರಂದು ಬೆಳಗ್ಗೆ ಪಾಡಿಗಾರ ಕೆಳಂಗಡಿ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story