ಉಕ್ರೇನ್ ನಿಂದ ರಾಜ್ಯಕ್ಕೆ ಒಟ್ಟು 45 ವಿದ್ಯಾರ್ಥಿಗಳ ಆಗಮನ

ಬೆಂಗಳೂರು, ಮಾ.1: ಉಕ್ರೇನ್ ದೇಶದಿಂದ ಇದುವರೆಗೂ ರಾಜ್ಯಕ್ಕೆ 45 ವಿದ್ಯಾರ್ಥಿಗಳು ಆಗಮಿಸಿರುವ ಅಧಿಕೃತ ಮಾಹಿತಿ ಇದೆ ಎಂದು ಕೆಎಸ್‍ಡಿಎಂಎ ಆಯುಕ್ತ ಹಾಗೂ ನೋಡಲ್ ಅಧಿಕಾರಿ ಮನೋಜ್ ರಾಜನ್ ತಿಳಿಸಿದ್ದಾರೆ.
ಮಂಗಳವಾರ ಈ ಕುರಿತು ಪ್ರಕಟನೆ ಹೇಳಿಕೆಯಲ್ಲಿ ತಿಳಿಸಿರುವ ಅವರು, ಮೊದಲ ದಿನ ಮುಂಬೈ ಮೂಲಕ 12 ಮಂದಿ ವಿದ್ಯಾರ್ಥಿಗಳು ವಾಪಸಾಗಿದ್ದರು. ಉಳಿದವರು ಹೊಸದಿಲ್ಲಿ ಮೂಲಕ ಬೆಂಗಳೂರಿಗೆ ಮರಳಿದ್ದಾರೆ. ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದರು.
ಕೇಂದ್ರ ಸರಕಾರದ ನೆರವಿನೊಂದಿಗೆ ಈತನಕ 45 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅಲ್ಲಿನ ರಾಯಭಾರಿ ಕಚೇರಿಗಳೊಂದಿಗೆ ಸಂಪರ್ಕದಲ್ಲಿದ್ದು, ಉಳಿದ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ..
ಉಕ್ರೇನ್‍ನಲ್ಲಿ ಒಟ್ಟು 451 ಮಂದಿ ಸಿಲುಕಿಕೊಂಡಿದ್ದರು. ಅವರನ್ನು ಕರೆತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಕೇಂದ್ರ ಸರಕಾರದ ಆಪರೇಷನ್ ಗಂಗಾ ಅಡಿಯಲ್ಲಿ ಸುರಕ್ಷಿತವಾಗಿ ವಿಮಾನದ ಮೂಲಕ ಕರೆತರುವ ಕೆಲಸ ಆಗುತ್ತಿದೆ ಎಂದು ಅವರು ಹೇಳಿದ್ದಾರೆ.







