Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ...

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಆರ್ಥಿಕ ಅಶಿಸ್ತು

► ದಂಡದ ಮೊತ್ತದಲ್ಲಿ ವ್ಯತ್ಯಾಸ ► ಲೆಕ್ಕ ಪರಿಶೋಧನಾ ವರದಿಯಿಂದ ಬಹಿರಂಗ

ಜಿ.ಮಹಾಂತೇಶ್ಜಿ.ಮಹಾಂತೇಶ್2 March 2022 8:42 AM IST
share
ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಆರ್ಥಿಕ ಅಶಿಸ್ತು

ಬೆಂಗಳೂರು, ಮಾ.1: 2020ರ ಜುಲೈ ಮತ್ತು ಸೆಪ್ಟಂಬರ್‌ನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ ಕಾರ್ಯ ಮಾಡಿದ ಮೌಲ್ಯಮಾಪಕರಿಂದ ವಸೂಲು ಮಾಡಿರುವ ದಂಡದ ಮೊತ್ತ, ವಿದ್ಯಾರ್ಥಿಗಳು ಪಾವತಿಸಿರುವ ಪರೀಕ್ಷಾ ಶುಲ್ಕ ಮೊತ್ತ ಮತ್ತು ಇದೇ ಅವಧಿಯಲ್ಲಿ ಹಿಂದುಳಿದ ವರ್ಗಗಳ ವಿವಿಧ ಪ್ರವರ್ಗಗಳಿಗೆ ಸೇರಿದ ಎಸೆಸೆಲ್ಸಿ ವಿದ್ಯಾರ್ಥಿಗಳಿಂದ ಸ್ವೀಕರಿಸಿರುವ ಮೊತ್ತ ಸೇರಿದಂತೆ ಒಟ್ಟಾರೆ 9.26 ಕೋಟಿ ರೂ. ವ್ಯತ್ಯಾಸ ಕಂಡು ಬಂದಿರುವುದನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಲೆಕ್ಕ ಪರಿಶೋಧನಾ ವರದಿಯು ಹೊರಗೆಡವಿದೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2020-21ನೇ ಸಾಲಿಗೆ ಸಂಬಂಧಿಸಿದಂತೆ ಲೆಕ್ಕ ಪರಿಶೋಧನಾ ವರದಿಯು ಮಂಡಳಿಯ ಲೆಕ್ಕಪತ್ರಗಳಲ್ಲಿ ನ್ಯೂನತೆಗಳು ಮತ್ತು ಆರ್ಥಿಕ ಅಶಿಸ್ತಿನ ಪರಮಾವಧಿಯನ್ನು ಬಹಿರಂಗಗೊಳಿಸಿದೆ. ಮಂಡಳಿಯ ಲೆಕ್ಕ ಪರಿಶೋಧನಾ ವರದಿಯ ಪ್ರತಿ ‘the-file.in’ಗೆ ಲಭ್ಯವಾಗಿದೆ.

2020-21ನೇ ಸಾಲಿನಲ್ಲಿ ಐಎಎಸ್ ಅಧಿಕಾರಿ ಜಗದೀಶ್ ಮತ್ತು ಅನ್ಬುಕುಮಾರ್ ಅವರು ಅಧ್ಯಕ್ಷರಾಗಿ ಮತ್ತು ವಿ. ಸುಮಂಗಲ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಜುಲೈ ಮತ್ತು 2020ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ ಕಾರ್ಯ ಮಾಡಿದ ಮೌಲ್ಯಮಾಪಕರಿಂದ ವಸೂಲು ಮಾಡಿರುವ ದಂಡದ ಮೊತ್ತದಲ್ಲಿ ವ್ಯತ್ಯಾಸ ಕಂಡು ಬಂದಿದೆ. ದಂಡದ ಮೊತ್ತ ವಸೂಲು ಮಾಡುವ ಶಾಖೆಯ ಲೆಕ್ಕದಂತೆ 3,49,700 ರೂ. ಇದ್ದರೆ ಮಂಡಳಿಯು ಲೆಕ್ಕ ಪರಿಶೋಧಕರಿಗೆ ನೀಡಿರುವ ಮಾಹಿತಿಯಂತೆ 13,18, 849 ರೂ. ಮತ್ತು ಸನ್ನದು ಲೆಕ್ಕ ಪರಿಶೋಧಕರ ವರದಿ ಪ್ರಕಾರ 12, 05,065 ರೂ. ಇದೆ ಎಂದು ಲೆಕ್ಕಪರಿಶೋಧನೆ ವರದಿಯಲ್ಲಿ ವಿವರಿಸಲಾಗಿದೆ.

2017-18ರಲ್ಲಿ ನಡೆದ ಪರೀಕ್ಷೆ ವೇಳೆಯಲ್ಲಿ ಅಸಮರ್ಪಕವಾಗಿ ಮೌಲ್ಯಮಾಪನ ಮಾಡಿರುವ ಮೌಲ್ಯಮಾಪಕರಿಗೆ 24,95,800 ರೂ. ದಂಡ ಮೊತ್ತವನ್ನು ವಿಧಿಸಿದ್ದರೆ ಇದರಲ್ಲಿ 21,16,600 ರೂ. ವಸೂಲು ಮಾಡಿರುವ ಮಂಡಳಿಯು ಇನ್ನೂ 3,79,200 ರೂ.ನ್ನು ವಸೂಲಿ ಮಾಡಿಲ್ಲ. 2018ರಲ್ಲಿ 33,38,500 ರೂ. ದಂಡ ಮೊತ್ತ ವಿಧಿಸಿದ್ದರೆ ಈ ಪೈಕಿ 27,42,100 ರೂ. ವಸೂಲು ಮಾಡಿ ಇನ್ನೂ 5,96,400 ರೂ.ಗಳನ್ನು ಬಾಕಿ ಇರಿಸಿಕೊಂಡಿದೆ. 2019-20ರಲ್ಲಿ 40,62,200 ರೂ. ದಂಡ ವಿಧಿಸಿದ್ದರೆ ಇದರಲ್ಲಿ 27, 28,554 ರೂ. ವಸೂಲು ಮಾಡಿರುವ ಮಂಡಳಿಯು ಇನ್ನೂ 13,33,646 ರೂ.ಗಳನ್ನು ವಸೂಲಿಗೆ ಬಾಕಿ ಇರಿಸಿರುವುದು ವರದಿಯಿಂದ ತಿಳಿದು ಬಂದಿದೆ.

2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ ಮಾಡಿರುವ ಸಂಬಂಧ 6,106 ಇದ್ದರೆ 2020 ಸೆಪ್ಟಂಬರ್‌ನಲ್ಲಿ 514 ಪ್ರಕರಣಗಳಿದ್ದವು. ಈ ಎಲ್ಲಾ ಪ್ರಕರಣಗಳಿಂದ ಒಟ್ಟಾರೆಯಾಗಿ 51,26,600 ರೂ. ದಂಡ ವಿಧಿಸಲಾಗಿತ್ತು. ಆದರೆ 2021ರ ಮಾರ್ಚ್ ಅಂತ್ಯದವರೆಗೂ ಈ ದಂಡದ ಮೊತ್ತವನ್ನು ವಸೂಲಿ ಮಾಡಿಲ್ಲ.

ಇಂತಹ ಪ್ರಕರಣಗಳಲ್ಲಿ ದಂಡದ ಮೊತ್ತವನ್ನು ವಿಧಿಸುವುದು ಮತ್ತು ವಸೂಲು ಮಾಡದಿರುವ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಿಗೆಯಾಗುತ್ತಿದೆ. 2016-17ರಲ್ಲಿ 3,049 ಶಿಕ್ಷಕರು, 2017-18ರಲ್ಲಿ 4,171 ಶಿಕ್ಷಕರು, 2018-19ರಲ್ಲಿ 5,374 ಶಿಕ್ಷಕರು, 2019-20ರಲ್ಲಿ 6,620 ಶಿಕ್ಷಕರು ಅಸಮರ್ಪಕ ಮೌಲ್ಯಮಾಪನ ಕಾರ್ಯ ಮಾಡಿದ್ದಾರೆ.

ಪರೀಕ್ಷಾ ಕಾರ್ಯ, ಮೌಲ್ಯಮಾಪನ, ಫಲಿತಾಂಶ ಪ್ರಕಟನೆ, ಅಂಕಪಟ್ಟಿಯ ಮುದ್ರಣ ಮತ್ತು ವಿತರಣಾ ಕಾರ್ಯವು ಈ ಮಂಡಳಿಯ ಮುಖ್ಯ ಧ್ಯೆಯೋದ್ದೇಶಗಳಾಗಿವೆ. ಮೌಲ್ಯಮಾಪನ ಕಾರ್ಯದಲ್ಲಿ ವರ್ಷದಿಂದ ವರ್ಷಕ್ಕೆ ಲೋಪಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮುಖ್ಯ ಧ್ಯೆಯೋದ್ದೇಶ ಈಡೇರಿದಂತಾಗುವುದಿಲ್ಲ. ಈ ವಿಷಯವು ಮಂಡಳಿಯ ಮುಖ್ಯ ಅಂಶವಾಗಿದ್ದು ಈ ಬಗ್ಗೆ ಸಂಬಂಧಿಸಿದ ಪ್ರಾಧಿಕಾರವು ಗಮನಹರಿಸಬೇಕು ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ಹೇಳಲಾಗಿದೆ.

ಅದೇ ರೀತಿ ಜುಲೈ ಮತ್ತು ಸೆಪ್ಟಂಬರ್ 2020ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಶುಲ್ಕದ ಮೊತ್ತದಲ್ಲಿಯೂ ವ್ಯತ್ಯಾಸ ಇರುವುದನ್ನು ಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದಾರೆ. ಈ ಬಾಬ್ತಿನಲ್ಲಿ ಮಂಡಳಿ ನೀಡಿರುವ ಮಾಹಿತಿ ಪ್ರಕಾರ 18,23,08,849 ರೂ. ಇದ್ದರೆ ಸನ್ನದು ಲೆಕ್ಕಪರಿಶೋಧಕರ ವರದಿಯಂತೆ 25,81,66,846 ರೂ. ಇದೆ. ಇವೆರಡರ ನಡುವಿನ ವ್ಯತ್ಯಾಸ 7,58,57,997 ರೂ. ಇದೆ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ಹೇಳಲಾಗಿದೆ.

ಇನ್ನು ಹಿಂದುಳಿದ ವರ್ಗಗಳ ಪ್ರವರ್ಗ 1, ಪ್ರವರ್ಗ 2 ಎ, 3 ಎ ಮತ್ತು 3 ಬಿಗೆ ಸೇರಿದ ಎಸೆಸೆಲ್ಸಿ ವಿದ್ಯಾರ್ಥಿಗಳಿಂದ ಸ್ವೀಕರಿಸಿರುವ ಮೊತ್ತದಲ್ಲಿಯೂ ವ್ಯತ್ಯಾಸವಿದೆ ಎಂಬ ಅಂಶ ಲೆಕ್ಕ ಪರಿಶೋಧನೆಯಿಂದ ತಿಳಿದು ಬಂದಿದೆ. ಮಂಡಳಿಯು ನೀಡಿರುವ ಮಾಹಿತಿ ಪ್ರಕಾರ 34,17,90,954 ರೂ. ಇದ್ದರೆ ಸನ್ನದು ಲೆಕ್ಕಪರಿಶೋಧಕರ ವರದಿಯಲ್ಲಿ ಎ3 32, 49, 76, 319 ರೂ. ಇದೆ. ಇವೆರಡರ ನಡುವೆ 1,68,14,635 ರೂ. ಇದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

2020-21ನೇ ಸಾಲಿನಲ್ಲಿ ಎಸೆಸೆಲ್ಸಿ ಹಿಂದುಳಿದ ವರ್ಗಗಳ ಕಲ್ಯಾಣ ವಿದ್ಯಾರ್ಥಿಗಳಾದ ಪ್ರವರ್ಗ 1, ಪ್ರವರ್ಗ 2ಎ, ಪರ್ವ 3ಎ ಮತ್ತು 3 ಬಿ ಸ್ವೀಕೃತಿ ಮೊತ್ತದ ಬಗ್ಗೆ ನಿಖರತೆ ಕಂಡು ಬಂದಿರುವುದಿಲ್ಲ ಎಂದು ಲೆಕ್ಕ ಪರಿಶೋಧಕರು ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಇದೇ ಸಾಲಿನಲ್ಲಿ ಇಎಂಡಿ ಮೊತ್ತದ ಕುರಿತು ಸನ್ನದು ಲೆಕ್ಕಪರಿಶೋಧನಾ ವರದಿಯನ್ನು ಪರಿಶೀಲಿಸಿದಾಗ ಮಂಡಳಿಯು ನೀಡಿರುವ ಲೆಕ್ಕಗಳಂತೆ 23,73,361 ರೂ. ಬಾಕಿ ಉಳಿದಿದ್ದು ಸನ್ನದು ಲೆಕ್ಕಿಗರು ನೀಡಿರುವ ಲೆಕ್ಕದಂತೆ 11, 32,688 ರೂ. ಬಾಕಿ ವ್ಯತ್ಯಾಸ ಕಂಡು ಬಂದಿದೆ.

ಮಂಡಳಿಯು 2020-21ನೇ ಸಾಲಿನಲ್ಲಿ ಆರ್ಥಿಕ ವಹಿವಾಟು ನಡೆಸುತ್ತಿರುವ ಕಾರ್ಪೊರೇಷನ್ ಬ್ಯಾಂಕ್, ಕೆನರಾ ಬ್ಯಾಂಕ್‌ನಲ್ಲಿ ಇರುವ ಮೊತ್ತದಲ್ಲಿಯೂ ವ್ಯತ್ಯಾಸವಿದೆ. ಕಾರ್ಪೋರೇಷನ್ ಬ್ಯಾಂಕ್ (ಖಾತೆ ಸಂಖ್ಯೆ; 111744) ಖಾತೆಯಲ್ಲಿ ವ್ಯತ್ಯಾಸದ ಮೊತ್ತ 3,13,382 ರೂ. ಹಾಗೂ ಇದೇ ಬ್ಯಾಂಕ್‌ನ ಮತ್ತೊಂದು ಖಾತೆ (ಸಂಖ್ಯೆ; 111825)ಗೆ ಸಂಬಂಧಿಸಿದಂತೆ ವ್ಯತ್ಯಾಸದ ಮೊತ್ತ 1,32,68, 115 ರೂ. 2021ರ ಮಾರ್ಚ್ 31ರ ಅಂತ್ಯಕ್ಕೆ ನಗದಾಗದೇ ಇರುವ ಚೆಕ್‌ಗಳಿಂದ ವ್ಯತ್ಯಾಸವಾಗಿದೆ ಎಂಬುದು ಲೆಕ್ಕ ಪರಿಶೋಧನೆ ವರದಿಯಿಂದ ಗೊತ್ತಾಗಿದೆ.

ಇದೇ ಸಾಲಿನ ನಗದು ಪುಸ್ತಕ ಮತ್ತು ಬ್ಯಾಂಕ್ ಪಾಸ್ ಶೀಟ್‌ಗಳನ್ನು ಪರಿಶೀಲಿಸಿರುವ ಲೆಕ್ಕ ಪರಿಶೋಧಕರು ನಗದು ಪುಸ್ತಕದ ಪ್ರಕಾರ 2021ರ ಮಾರ್ಚ್ ಅಂತ್ಯಕ್ಕೆ ಅಂತಿಮ ಶಿಲ್ಕು 38,76,82,119 ರೂ. ಇತ್ತು. ಬ್ಯಾಂಕ್ ಪಾಸ್ ಶೀಟ್ ಪ್ರಕಾರ 23,38,826 ರೂ. ಇತ್ತು. ಒಟ್ಟಾರೆ 39,36,97,805 ರೂ. ಆಗಿರುತ್ತದೆ. ಹಿಂದಿನ ವರ್ಷಗಳಿಂದಲೂ 51,39,131 ರೂ.ಗಳ ವ್ಯತ್ಯಾಸ ಮೊತ್ತ ಪ್ರಾರಂಭಿಕ ಶಿಲ್ಕು ರೂಪದಲ್ಲಿ ಬರುತ್ತಿದ್ದು ಇದನ್ನು ಸರಿಪಡಿಸಿಕೊಳ್ಳಬೇಕು, ಎಂು ಲೆಕ್ಕ ಪರಿಶೋಧನೆ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

ಮಂಡಳಿ ಹೊಂದಿರುವ ಬ್ಯಾಂಕ್ ಖಾತೆವಾರು ಪ್ರತ್ಯೇಕವಾಗಿ ವಾರ್ಷಿಕವಾಗಿ ನಗದು ಪುಸ್ತಕಗಳನ್ನು ನಿರ್ವಹಿಸಿದೆ. ಆದರೆ ಕ್ರೋಡೀಕೃತ ಆರ್ಥಿಕ ವ್ಯವಹಾರವನ್ನು ದಾಖಲಿಸಿ ನಗದು ಪುಸ್ತಕವನ್ನು ನಿರ್ವಹಿಸಿಲ್ಲ. ಇದರಿಂದಾಗಿ 2020-21ನೇ ಸಾಲಿನಲ್ಲಿ ನಡೆಸಲಾಗಿರುವ ಆರ್ಥಿಕ ವ್ಯವಹಾರಗಳನ್ನು ಬ್ಯಾಂಕ್ ಖಾತೆವಾರು ನಿರ್ವಹಿಸಿರುವ ನಗದು ಪುಸ್ತಕಗಳಲ್ಲಿನ ಆರ್ಥಿಕ ವ್ಯವಹಾರಗಳನ್ನು ಆಧರಿಸಿ ಪರಿಶೀಲಿಸಿರುವುದು ವರದಿಯಿಂದ ಕಂಡು ಬಂದಿದೆ.

ಆನ್‌ಲೈನ್ ಮೂಲಕ ಹಣ ವರ್ಗಾವಣೆ ಮಾಡಲಾಗಿರುವ ಮೊತ್ತವು ಹೊಂದಾಣಿಕೆಯಾಗದೇ ಬ್ಯಾಂಕ್‌ನ ಖಾತೆಗೆ ಮರು ಹೊಂದಾಣಿಕೆಯಾದ ಸಂದರ್ಭದಲ್ಲಿ ಈ ಮೊತ್ತವನ್ನು ಸ್ವೀಕೃತಿ ಭಾಗದಲ್ಲಿ ನಮೂದಿಸಿ ನಂತರ ಲೆಕ್ಕ ಸಮನ್ವಯಗೊಳಿಸಲಾಗಿದೆ. ಆ ನಂತರ ಸಂಬಂಧಪಟ್ಟ ಸಂಸ್ಥೆಗೆ ಪಾವತಿಸಬೇಕಾಗಿದ್ದರೂ ಈ ನಿಯಮವನ್ನು ಪಾಲಿಸಿರುವುದಿಲ್ಲ ಎಂದು ಲೆಕ್ಕ ಪರಿಶೋಧಕರು ಅಭಿಪ್ರಾಯಿಸಿದ್ದಾರೆ.

ಪಾವತಿಗೆ ಸಂಬಂಧಿಸಿದಂತೆ ಪಾವತಿಯ ಉದ್ದೇಶ ಪಾವತಿಸಿರುವ ಸಂಸ್ಥೆಯ ವಿವರವನ್ನು ಧನಾದೇಶವಾರು/ಎನ್‌ಎಎಫ್‌ಟಿ/ಆರ್‌ಟಿಜಿಎಸ್ ಅನ್ವಯ ನಮೂದಿಸಬೇಕಾಗಿದ್ದರೂ ನಮೂದಿಸಿಲ್ಲ. ಪಾವತಿಗೆ ಸಂಬಂಧಿಸಿದಂತೆ ಓಚರ್ ಸಂಖ್ಯೆಯನ್ನೂ ನಮೂದಿಸಿಲ್ಲ. ಇದರಿಂದಾಗಿ ಎಷ್ಟು ಪಾವತಿಗಳನ್ನು ಮಾಡಿದೆಯೆಂದು ನಗದು ಪುಸ್ತಕದಲ್ಲಿ ವಿವರಿಸಲು ಕಷ್ಟಕರವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕೆಲವು ಸಂದರ್ಭಗಳಲ್ಲಿ ನಗದು ವಹಿಯಲ್ಲಿನ ನಮೂದುಗಳನ್ನು ತಿದ್ದಲಾಗಿದೆ. ಇದು ಕರ್ನಾಟಕ ಆರ್ಥಿಕ ಸಂಹಿತೆ ಅನುಚ್ಛೇದ 328(ಅ)ರ ಪ್ರಕಾರ ನಗದು ವಹಿ ಹಾಗೂ ಇತರ ಮುಖ್ಯ ವಹಿಗಳಲ್ಲಿ ಒಂದು ಬಾರಿ ಮಾಡಿದ ನಮೂದನ್ನು ತಿದ್ದುವುದಾಗಲಿ ಅಥವಾ ಬಿಳಿ ಇಂಕ್ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೂ ಮಂಡಳಿಯು ಕೆಲವು ಸಂದರ್ಭಗಳಲ್ಲಿ ನಗು ವಹಿಯಲ್ಲಿನ ನಮೂದುಗಳನ್ನು ತಿದ್ದಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X