Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ರಾಜ್ಯದಲ್ಲಿ ರೈತರ ಆತ್ಮಹತ್ಯೆ ಗಣನೀಯ...

​ರಾಜ್ಯದಲ್ಲಿ ರೈತರ ಆತ್ಮಹತ್ಯೆ ಗಣನೀಯ ಹೆಚ್ಚಳ !

ವಾರ್ತಾಭಾರತಿವಾರ್ತಾಭಾರತಿ2 March 2022 8:48 AM IST
share
​ರಾಜ್ಯದಲ್ಲಿ ರೈತರ ಆತ್ಮಹತ್ಯೆ ಗಣನೀಯ ಹೆಚ್ಚಳ !

ಬೆಳಗಾವಿ: ದೇಶಾದ್ಯಂತ ರಾಜಕೀಯ ಪಕ್ಷಗಳು, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ತಳಮಟ್ಟಲ್ಲಿ ಮಾತ್ರ ಇನ್ನೂ ಪರಿಸ್ಥಿತಿ ಗಂಭೀರವಾಗಿಯೇ ಇದೆ. ಉದಾಹರಣೆಗೆ ಕರ್ನಾಟಕವನ್ನು ತೆಗೆದುಕೊಂಡರೆ 2015-16ರಿಂದೀಚೆಗೆ ರಾಜ್ಯದಲ್ಲಿ 7463 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2010-2015ರ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ (744)ಗೆ ಹೋಲಿಸಿದರೆ ಇದು ಹತ್ತು ಪಟ್ಟು ಅಧಿಕ ಎಂದು times of india ವರದಿ ಮಾಡಿದೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಸ್ಥಿತಿ ಉಲ್ಬಣಿಸಿದ್ದು ಕರ್ನಾಟಕದಲ್ಲಿ ಸಾವಿರಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟು ಸಾಲದೆಂಬಂತೆ ಕರ್ನಾಟಕ ಸರ್ಕಾರ ಮೃತರ ಕುಟುಂಬಗಳಿಗೆ ನ್ಯಾಯಸಮ್ಮತ ಪರಿಹಾರವನ್ನು ವಿತರಿಸುವಲ್ಲಿ ಕೂಡಾ ವಿಫಲವಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬರುತ್ತದೆ. 2010-11ರಿಂದೀಚೆಗೆ 8207 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪರಿಹಾರ ಸಿಕ್ಕಿರುವುದು 5756 ರೈತರ ಕುಟುಂಬಗಳಿಗೆ ಮಾತ್ರ.

ಸಂತ್ರಸ್ತ ಕುಟುಂಬಗಳ ಸಂಬಂಧಿಕರು ಸಲ್ಲಿಸಿದ ಅರ್ಜಿಗಳನ್ನು ಸರ್ಕಾರ ವಿವಿಧ ಕಾರಣಗಳಿಂದ ತಿರಸ್ಕರಿಸಿದೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ 5 ಲಕ್ಷ ರೂಪಾಯಿ ಪರಹಾರ ಪಡೆಯಲು ಅರ್ಹವಾಗಿರುತ್ತದೆ.

ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಭೀಮನಗೌಡ ಜಿ.ಪರಗೊಂಡ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿಯಿಂದ ಈ ಅಂಶ ಬಹಿರಂಗವಾಗಿದೆ. ನಿರಂತರ ಬರ ಪರಿಸ್ಥಿತಿ, ಪ್ರವಾಹ ಪರಿಸ್ಥಿತಿ ರೈತರ ಪಾಲಿಗೆ ಮಾರಕವಾಗಿ ಪರಿಣಮಿಸಿದೆ. ಹಲವು ಮಂದಿ ರೈತರು ಮಾರುಕಟ್ಟೆಯಲ್ಲಿ ಬೆಲೆ ವ್ಯತ್ಯಯದಿಂದ ಹತಾಶೆಗೊಂಡು ನಿರೀಕ್ಷಿತ ಬೆಲೆ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದರ ಜತೆಗೆ 2000ಕ್ಕೂ ಹೆಚ್ಚು ಮೃತ ರೈತರ ಕುಟುಂಬಗಳಿಗೆ ಪರಿಹಾರ ನಿರಾಕರಿಸಲಾಗಿದೆ. 407 ಮೃತ ರೈತರ ಕ್ಲೇಮ್‌ಗಳಿಗೆ ಸರ್ಕಾರದ ಅನುಮೋದನೆ ದೊರಕಿದ್ದರೂ ಈ ಕುಟುಂಬಗಳಿಗೆ ಸರ್ಕಾರ ಇನ್ನೂ ಪರಿಹಾರ ವಿತರಿಸಬೇಕಿದೆ. ಕೆಲ ರೈತರ ಆತ್ಮಹತ್ಯೆ ಕೃಷಿ ಸಂಬಂಧಿತ ಕಾರಣಗಳಿಗೆ ಅಲ್ಲ. ಆದ್ದರಿಂದ ಅವರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಆದರೆ ಮೃತ ರೈತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಸರ್ಕಾರ 5 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದರಿಂದ ಅಧಿಕಾರಿಗಳು ಮನವಿ ತಿರಸ್ಕರಿಸಲು ಹಲವು ನೆಪಗಳನ್ನು ಹುಡುಕುತ್ತಾರೆ ಎನ್ನುವುದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಅವರ ಆರೋಪ. ಸಂಘ ಹಲವು ಕುಟುಂಬಗಳಿಗೆ ಪರಿಹಾರ ಪಡೆಯಲು ನೆರವಾಗಿದೆ ಎಂದು ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X