ಮಾರ್ಚ್ 5ರವರೆಗೆ ಆಳಂದದಲ್ಲಿ 144 ನಿಷೇಧಾಜ್ಞೆ ವಿಸ್ತರಣೆ: ಡಿಸಿ ಯಶವಂತ ಗುರುಕರ್

ಕಲಬುರಗಿ: ಆಳಂದ ತಾಲೂಕಿನಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಮಾ.3ರವರೆಗೆ ತಾಲೂಕಿನಾದ್ಯಂತ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಮಾ.5ರ ಬೆಳಗ್ಗೆ 6ಗಂಟೆವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.
ಇದಲ್ಲದೆ ಕರ್ನಾಟಕ ಅಬಕಾರಿ ಕಾಯ್ದೆ-1965 ಕಲಂ 21ರನ್ವಯ ಎಲ್ಲಾ ತರಹದ ಮದ್ಯಪಾನ, ಸಾರಾಯಿ, ಶೇಂದಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಹಾಗೂ ಮಾದಕ ವಸ್ತುಗಳ ಮಾರಾಟವನ್ನು ಮಾ.5ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಿಲಾಗಿದೆ ಮತ್ತು ಈ ಅವಧಿಯಲ್ಲಿ ತಾಲೂಕಿನ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಸಹ ಮುಚ್ಚುವಂತೆ ಆದೇಶಿಸಲಾಗಿದೆ.
Next Story





