Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಜಾಬಿಗೆ ವಿರೋಧ: ಉಳ್ಳಾಲ ಭಾರತ್ ಪಿಯು...

ಹಿಜಾಬಿಗೆ ವಿರೋಧ: ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ2 March 2022 3:32 PM IST
share
ಹಿಜಾಬಿಗೆ ವಿರೋಧ: ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

ಉಳ್ಳಾಲ: ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮೂರು ದಿನಗಳ ರಜೆಯ ಬಳಿಕ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ  ಬುಧವಾರ ಮತ್ತೆ ರಜೆ ಮುಂದುವರಿಸಲಾಗಿದೆ.

ಕಳೆದ ಶುಕ್ರವಾರ ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ಹಿಜಾಬಿಗೆ ವಿರೋಧ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಕಾಲೇಜು ಆಡಳಿತವು ವಿದ್ಯಾರ್ಥಿಗಳಿಗೆ ಮಂಗಳವಾರದವರೆಗೆ ರಜೆ ನೀಡಿತ್ತು. ಬುಧವಾರ ಮತ್ತೆ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಬಂದಿದ್ದು, ಕಾಲೇಜಿನ ಪ್ರಾಂಶುಪಾಲೆ ಕಲಾವತಿ ಅವರು ಎಲ್ಲಾ ವಿದ್ಯಾರ್ಥಿಗಳಿಗೂ ಆನ್ ಲೈನ್ ತರಗತಿ ನಡೆಸಲಾಗುವುದೆಂದು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಆನ್ ಲೈನ್ ಕ್ಲಾಸ್ ನಮಗೆ ಅರ್ಥ ಆಗಲ್ಲ. ಪರೀಕ್ಷೆ ಬೇರೆ ಹತ್ರ ಬರ್ತಿದೆ. ಪಾಠ ಸಂಪೂರ್ಣಗೊಂಡಿಲ್ಲ, ಆನ್ ಲೈನ್ಗೆ ನಮ್ಮಲ್ಲಿ ಮೊಬೈಲ್ ಕೂಡಾ ಇಲ್ಲ ಎಂದು ಹೇಳಿದರು.

ಈ ವೇಳೆ ಪ್ರಾಂಶುಪಾಲೆ ಕಲಾವತಿ ವಿದ್ಯಾರ್ಥಿನಿಯರಲ್ಲಿ ಹಿಜಾಬ್ ಕಳಚಿ ತರಗತಿಗೆ ಹೋಗಬೇಕಾಗಿ ಆದೇಶವಿದೆ ಎಂದು ನ್ಯಾಯಾಲಯದ ಆದೇಶ ಪತ್ರ ತೋರಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ  ವಿದ್ಯಾರ್ಥಿನಿಯರು ಕೋರ್ಟ್ ಆದೇಶ ಬರುವವರೆಗೂ ನಮಗೆ ಹಿಜಾಬ್ ಧರಿಸಲು ಅವಕಾಶ ನೀಡಲೇ ಬೇಕು, ನಮಗೆ ತರಗತಿಯಲ್ಲೇ ಪಾಠ ಹೇಳಿ ಎಂದು ಪಟ್ಟು ಹಿಡಿದರು.

ಶಾಲಾಡಳಿತದ ಮೇಲಸ್ತುವಾರಿ ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಸಾಲಿಯಾನ್  ಕಾಲೇಜಿಗೆ ಭೇಟಿ ನೀಡಿ, ಪ್ರಾಂಶುಪಾಲರಲ್ಲಿ ಚರ್ಚಿಸಿದರು.

ಪಿಯು ತರಗತಿ ಆರಂಭಿಸಲು ಕೋರ್ಟ್ ಮತ್ತು ಸರಕಾರದ ಆದೇಶವನ್ನೇ ಪಾಲಿಸಬೇಕಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗದೆ ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದೆಂಬ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಆನ್ ಲೈನ್ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಸಾಲ್ಯಾನ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್ ಗುರುಪ್ರಸಾದ್, ಗ್ರಾಮಕರಣಿಕ ಪ್ರಮೋದ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X