Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಕ್ರೇನ್‍ನಿಂದ ನವೀನ್ ಪಾರ್ಥಿವ ಶರೀರ...

ಉಕ್ರೇನ್‍ನಿಂದ ನವೀನ್ ಪಾರ್ಥಿವ ಶರೀರ ತರಲು ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ2 March 2022 5:31 PM IST
share
ಉಕ್ರೇನ್‍ನಿಂದ ನವೀನ್ ಪಾರ್ಥಿವ ಶರೀರ ತರಲು ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾ.2: ಉಕ್ರೇನ್‍ನಲ್ಲಿ ಮೃತಪಟ್ಟಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವುದು ಸರಕಾರದ ಪ್ರಥಮ ಆದ್ಯತೆಯಾಗಿದೆ.    ನವೀನ್ ಕುಟುಂಬಕ್ಕೆ ಎಲ್ಲ ಸಹಾಯ, ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಬುಧವಾರ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಗ್ಯಾನಗೌಡರ್ ಹಾಕಿಕೊಂಡಿರುವ ಬಟ್ಟೆಗಳನ್ನು ಹೋಲುವ ಕೆಲವು ಛಾಯಾಚಿತ್ರಗಳನ್ನು ಆತನ ಸ್ನೇಹಿತರು ಕಳುಹಿಸಿಕೊಟ್ಟಿದ್ದಾರೆ ಎಂದರು.

ಶೆಲ್ ದಾಳಿ ನಿಂತ ಮೇಲೆ ನವೀನ್ ಜೊತೆಗಿದ್ದವರು ತೆಗೆದ ಚಿತ್ರಗಳು ಅವು. ಈ ಬಗ್ಗೆ ವಿದೇಶಾಂಗ ಸಚಿವರೊಂದಿಗೆ ಹಾಗೂ ಉಕ್ರೇನಿನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೂ ಮಾತನಾಡಿ ನವೀನ್ ಪಾರ್ಥಿವ ಶರೀರವನ್ನು ಪಡೆಯಲು ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಭಾರತ ಸರಕಾರ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ತೆರವು ಮಾಡಲು ತೀವ್ರ ಪ್ರಯತ್ನ ಮಾಡುತ್ತಿದೆ. ಸುಮಾರು 26 ವಿಮಾನಗಳು ಮುಂದಿನ 2-3 ದಿನಗಳಲ್ಲಿ ಕರೆ ತರುತ್ತಿದ್ದು, ಈ ಪೈಕಿ ಕನ್ನಡಿಗರನ್ನು ಕರೆತರಲು ಗರಿಷ್ಠ ಪ್ರಯತ್ನ ಮಾಡಲಾಗುವುದು. ಬೇರೆ ಬೇರೆ ನಗರಗಳಲ್ಲಿ ಇರುವವರನ್ನು ಬೇರೆ ಬೇರೆ ದಿಕ್ಕಿನಲ್ಲಿ ಬರಲು ತಿಳಿಸಲಾಗಿದೆ. ಅವರೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.  

ಯುದ್ಧ ನಡೆಯುತ್ತಿರುವುದರಿಂದ ಸ್ವಲ್ಪ ಕಷ್ಟವಾಗಿದೆ. ಭಾರತ ಸರಕಾರ ಉಕ್ರೇನ್ ಸರಕಾರದೊಂದಿಗೆ ಮಾತನಾಡಿ ಸುರಕ್ಷಿತ ವಲಯಗಳಿಗೆ ಹೇಗೆ ಹೋಗಬೇಕೆನ್ನುವುದನ್ನು ಯೋಜಿಸಿ ಗುಂಪಿನಲ್ಲಿ ತೆರಳಲು ನಿರ್ದೇಶನ ನೀಡಿದೆ. ಹತ್ತಿರದ ರೈಲ್ವೆ ನಿಲ್ದಾಣದಲ್ಲಿ ಪಶ್ಚಿಮ ದಿಕ್ಕಿನತ್ತ ಬರಲು ಯೋಜಿಸಿದೆ. ಯುದ್ಧ ಭೂಮಿಯಿಂದ ಕನ್ನಡಿಗರನ್ನು ಹೊರತರುವ ಪ್ರಯತ್ನ ನಡೆದಿದೆ ಎಂದು ಅವರು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X