ಕಾಪು ತಾಲೂಕು ಕಸಾಪ ಅಧ್ಯಕ್ಷರಾಗಿ ಬಿ.ಪುಂಡಲೀಕ ಮರಾಠೆ

ಶಿರ್ವ, ಮಾ.2: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ತಾಲೂಕು ಘಟಕದ 2022 -27ನೆ ಸಾಲಿನ ನೂತನ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ, ಹಿರಿಯ ಪತ್ರಕರ್ತ ಬಿ.ಪುಂಡಲೀಕ ಮರಾಠೆ ಅವರನ್ನು ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಶಿಫಾರಾಸ್ಸಿನ ಮೇರೆಗೆ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ನೇಮಕ ಮಾಡಿದ್ದಾರೆ.
ಇವರು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಬಾರತೀಯ ಜೇಸೀಸ್, ರೋಟರ್ಯಾಕ್ಟ್, ರೋಟರಿ, ಸ್ಥಳೀಯ ಸಾಂಸ್ಕೃತಿಕ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯರು, ಭಾರತ ಸೇವಾದಳದ ಉಡುಪಿ ಜಿಲ್ಲಾ ಸಮಿತಿಯ ಸದಸ್ಯರು, ಅಂತಾರಾಷ್ಟ್ರೀಯ ರೋಟರಿಯ ಜಿಲ್ಲಾ ಸಮಿತಿಯಲ್ಲಿ ಸಭಾಪತಿಗಳಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





