ಭಟ್ಕಳ: ರಸ್ತೆ ಅಪಘಾತಕ್ಕೆ ಗಾಯಾಳು ಯುವಕ ಬಲಿ
ಭಟ್ಕಳ: ಪ್ಯಾಸೆಂಜರ್ ಆಟೋ ರಿಕ್ಷಾವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯ ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಹೆಬಳೆ ಬೇಲಿಗದ್ದೆ ಒಂದನೇ ಕ್ರಾಸ್ ಸಮೀಪ ನಡೆದಿದೆ.
ಮೃತ ಯುವಕನನ್ನು ಮುಂಡಳ್ಳಿ ನಿವಾಸಿ ಗಣೇಶ ಜಟ್ಟಾ ನಾಯ್ಕ ಎಂದು ತಿಳಿದು ಬಂದಿದೆ. ಸ್ಕೂಟಿ ಸವಾರ ದಿನೇಶ ನಾಯ್ಕ ನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





