Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀಟ್‍ನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ...

ನೀಟ್‍ನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ2 March 2022 9:00 PM IST
share
ನೀಟ್‍ನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮಾ.2: ನೀಟ್ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ನೀಟ್ ಬಂದ ಮೇಲೆ ಟ್ಯೂಷನ್ ದಂಧೆ ಮೇರೆ ಮೀರಿದ್ದು, ಅದಕ್ಕೆ ಕೇಂದ್ರ ಸರಕಾರವೇ ಪ್ರೋತ್ಸಾಹ ನೀಡುತ್ತಿರುವಂತಿದೆ. ಕೇಂದ್ರ ಸಚಿವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಓಇಇಖಿ), ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಉಕ್ರೇನ್‍ಗೆ ಮೆಡಿಕಲ್ ಓದಲು ಹೋಗಿ ರಶ್ಯ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ‘ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖ’ವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ‘ಅರ್ಹತೆ’ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ‘ಅನ್ಯಾಯ’ಕ್ಕೆ ಅಂತ್ಯ ಹಾಡಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
10ನೇ ತರಗತಿಯಲ್ಲಿ ಶೇ.96, 2ನೇ ಪಿಯುಸಿಯಲ್ಲಿ ಶೇ.97 ಅಂಕ ಗಳಿಸಿದ್ದರೂ ನವೀನ್‍ಗೆ ‘ಜಗತ್ತಿನ ಶಿಕ್ಷಣ ಕಾಶಿ’ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್‍ಗೆ ಹೋಗಿ, ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ‘ವಿಶ್ವಗುರು’ ಆಗಬೇಕೆಂದು ಹಾತೊರೆಯುತ್ತಿರುವ ‘ಭಾರತದ ಆತ್ಮಸಾಕ್ಷಿ’ಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ? ಎಂದು ಅವರು ಪ್ರಶ್ನಿಸಿದ್ದಾರೆ.

ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ‘ಟ್ಯೂಷನ್ ಅಂಗಡಿ’ಗಳು  ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ. ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ ಮತ್ತೂ ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಸರಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೇ ‘ಟ್ಯೂಷನ್ ಅಂಗಡಿ’ಗಳು ಮಾರುಕಟ್ಟೆ ವಿಸ್ತರಿಸಿ ನವೀನ್‍ರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ. ನೀಟ್ ಹೆಸರಿನಲ್ಲಿ ನೀಟಾಗಿ ಉಳ್ಳವರಿಗೆ ವೈದ್ಯ ಶಿಕ್ಷಣವನ್ನು ‘ದಾಸೋಹ’ ಮಾಡುವ ದಂಧೆ ವಿರುದ್ಧ ಎಲ್ಲರೂ ದನಿ ಎತ್ತಬೇಕಿದೆ ಎಂದು ಅವರು ಕರೆ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆ ನನಗೆ ಅಚ್ಚರಿ ತಂದಿದೆ. “ವಿದೇಶದಲ್ಲಿ ವೈದ್ಯಪದವಿ ಪಡೆಯುವ ಶೇ.90ರಷ್ಟು ವಿದ್ಯಾರ್ಥಿಗಳು ಭಾರತದಲ್ಲಿ ಅಗತ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ. ವಿದೇಶ ಮತ್ತು ಭಾರತದಲ್ಲಿ ವೈದ್ಯಶಿಕ್ಷಣಕ್ಕೆ ಆಗುವ ವೆಚ್ಚದ ಬಗ್ಗೆ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ” ಎಂದಿದ್ದಾರೆ ಅವರು ಎಂದು ಕುಮಾರಸ್ವಾಮಿ ಕಿಡಿಗಾರಿದ್ದಾರೆ.

ಕೇಂದ್ರದ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಮಂತ್ರಿಗಳೇ, “ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ನಾನೀಗ ಕಾರಣನಾಗುವುದಿಲ್ಲ” ಎಂದು ಹೇಳುವುದರ ಹಿಂದಿನ ಮರ್ಮವೇನು? ಅವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಟ್ಯೂಷನ್ ಅಂಗಡಿ’ಗಳ ಹಿಂದೆ ಯಾರಿದ್ದಾರೆ? ಯಾರಿಗೂ ಕಾಣದಂತೆ ಕೇಂದ್ರ ಸರಕಾರವೇ ಅವಿತು ಕೂತಿದೆಯಾ? ನೀಟ್ ಸೃಷ್ಟಿಸಿದ ‘ಶೈಕ್ಷಣಿಕ ಅರಾಜಕತೆ’ಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು? ನವೀನ್ ಸಾವು ನೀಟ್ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ‘ವ್ಯಾಪಾರೀಕರಣ’ ದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X