Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯೆನೆಪೊಯ ಆಸ್ಪತ್ರೆಯಲ್ಲಿ ಅಪರೂಪದ ಹೃದಯ...

ಯೆನೆಪೊಯ ಆಸ್ಪತ್ರೆಯಲ್ಲಿ ಅಪರೂಪದ ಹೃದಯ ಶಸ್ತಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ3 March 2022 8:20 PM IST
share
ಯೆನೆಪೊಯ ಆಸ್ಪತ್ರೆಯಲ್ಲಿ ಅಪರೂಪದ ಹೃದಯ ಶಸ್ತಚಿಕಿತ್ಸೆ

ಮಂಗಳೂರು, ಮಾ.3:ಯೆನೆಪೊಯ ಸ್ಪೆಷ್ಪಾಲಿಟಿ ಆಸ್ಪತ್ರೆಯ ಹೃದ್ರೋಗ ಶಸ್ತ್ರಚಿಕಿತ್ಸಕರ ತಂಡವು ರೋಗಿ ಯೊಬ್ಬರ ಹೃದಯಾಘಾತದಿಂದ ಉಂಟಾದ ರಂಧ್ರವನ್ನು (ವೆಂಟ್ರಿಕುಲಾರ್ ಸೆಪ್ಟಲ್ ರಪ್ಚರ್) ಶಸ್ತ್ರಚಿಕಿತ್ಸೆಯ ಮೂಲಕ ಸರಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೆಂಟ್ರಿಕುಲಾರ್ ಸೆಪ್ಟಲ್ ರಪ್ಚರ್ ಅತ್ಯಂತ ಗಂಭೀರ ಸ್ಥಿತಿಯಾಗಿದ್ದು, ಇದು ಹೃದಯಾಘಾತದಿಂದ ರಕ್ತ ಪರಿಚಲನೆ ಇಲ್ಲದೆ ಎರಡು ಹೃತ್ಕುಕ್ಷಿಗಳ (ವೆಂಟ್ರಿಕಲ್) ನಡುವಿನ ಗೋಡೆಯು ಒಡೆದು ರಂಧ್ರವು ಸೃಷ್ಟಿ ಯಾಗುವುದರಿಂದ ಸಂಭವಿಸುತ್ತದೆ. ಈ ರೀತಿಯ ರಂಧ್ರವು ಸಾಮಾನ್ಯವಾಗಿ ಹೃದಯಾಘಾತವಾಗಿ 1ರಿಂದ 14 ದಿನಗಳ ಅವಧಿಯಲ್ಲಿ ಉಂಟಾಗುವ ಸಂಭವವಿರುತ್ತದೆ.

ಹೃದಯಾಘಾತದ ನಂತರ ಶೇ.3ರಷ್ಟು ರೋಗಿಗಳಲ್ಲಿ ಈ ಸ್ಥಿತಿಯು ಸಂಭವಿಸಬಹುದಾಗಿದೆ.ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿದ್ದಲ್ಲಿ ಪರಿಸ್ಥಿತಿಯು ಅತ್ಯಂತ ಮಾರಣಾಂತಿಕವಾಗಿರುತ್ತದೆ. ಶೇ.75ರಷ್ಟು ರೋಗಿಗಳು ಜೀವ ಕಳೆದುಕೊಳ್ಳುವ ಅಪಾಯವೂ ಇರುತ್ತದೆ. ತುರ್ತು ಶಸ್ತ್ರಚಿಕಿತ್ಸೆಯು ಇಂತಹ ರೋಗಕ್ಕೆ ಮುಂಚೂಣಿಯ ಚಿಕಿತ್ಸೆಯಾಗಿದೆ.

ಬೆಂಗಳೂರು ಹಾಗೂ ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಯನ್ನು ನಿರಾಕರಿಸಿದ್ದರಿಂದ ಹೃದಯಾಘಾತದಿಂದ ಉಂಟಾದ ರಂಧ್ರವನ್ನು ಗುರುತಿಸಿದ 4 ವಾರಗಳ ನಂತರ ಯೆನೆಪೊಯ ಸ್ಪೆಷ್ಪಾಲಿಟಿ ಆಸ್ಪತ್ರೆಗೆ ದಾಖಲಾದ 50 ವರ್ಷದ ರೋಗಿಯನ್ನು ಕೆಲವು ಪರೀಕ್ಷೆಗಳ ನಂತರ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಯಿತು.

ದಾಖಲಾದ ಸಂದರ್ಭ ಮೂಲ ಖಾಯಿಲೆಯಿಂದ ಮೂತ್ರಪಿಂಡದ ಸಮಸ್ಯೆಯೂ ಉದ್ಭವಿಸಿತ್ತು. ಶಸ್ತ್ರಚಿಕಿತ್ಸಕ ರಾದ ಡಾ.ಶಕ್ತಿವೇಲ್ ನೇತೃತ್ವದ ತಂಡವು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿತು. ಹೃದಯ ಶಸ್ತ್ರಚಿಕಿತ್ಸಕರಾದ ಡಾ.ಗಣೇಶ್ ಕಾಮತ್ ಹಾಗೂ ಹೃದಯ ಸಂಬಂಧಿ ಅರವಳಿಕೆ ತಜ್ಞ ಡಾ. ಮೋಹನ್ ದಾಸ್, ಡಾ.ಕೃಷ್ಣಪ್ರಸಾದ್, ಡಾ.ವಿನಾಯಕ್ ಸಹಕರಿಸಿದರು. ಶಸ್ತ್ರ ಚಿಕಿತ್ಸಾ ನಂತರದ ಘಟಕದಲ್ಲಿ ನುರಿತ ವೈದ್ಯರ ಹಾಗೂ ಹಾಗೂ ಶುಶ್ರೂಕಿಯರ ತಂಡದ ಆರೈಕೆಯಲ್ಲಿ ರೋಗಿಯು ಗುಣಮುಖರಾಗಿ ಆಸ್ಪತ್ರೆಯಿಂದ ನಿರ್ಗಮಿಸಿದ್ದಾರೆ.

ಈ ವೈದ್ಯರ ತಂಡವು ಕ್ಲಿಷ್ಟಕರವಾದ ನಾಲ್ಕನೆಯ ಯಶಸ್ಸಿ ಶಸ್ತ್ರಚಿಕಿತ್ಸೆಯನ್ನು ಮಾಡಿದೆ. ಯೆನೆಪೊಯ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸುವ ತಂಡ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಕಳೆದ ಹಲವು ವರ್ಷಗಳಿಂದ ಕರ್ನಾಟಕ ಹಾಗೂ ಕೇರಳದ ಹಲವಾರು ಹೃದ್ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಾ ಬಂದಿದೆ. ಶೀಘ್ರದಲ್ಲೇ ಕೀ ಹೋಲ್ ಹಾಗೂ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆಯನ್ನು ಆರಂಭಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹೀರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X