Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ...

ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಸದ್ಯದಲ್ಲೇ ಇ-ಕಾಮರ್ಸ್ ವ್ಯವಸ್ಥೆ: ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ3 March 2022 11:09 PM IST
share
ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಸದ್ಯದಲ್ಲೇ ಇ-ಕಾಮರ್ಸ್ ವ್ಯವಸ್ಥೆ: ಡಾ.ಅಶ್ವತ್ಥನಾರಾಯಣ

ಮಂಗಳೂರು: ಸ್ವಸಹಾಯ ಸಂಘಗಳಲ್ಲಿ ಸಕ್ರಿಯರಾಗಿರುವ ಪ್ರತಿಯೊಬ್ಬ ಮಹಿಳಾ ಸದಸ್ಯರು ಆರ್ಥಿಕ ಸಬಲೀಕರಣ ಸಾಧಿಸುವಂತೆ ಮಾಡಲು ಸರಕಾರದ ವತಿಯಿಂದಲೇ ಇ-ಕಾಮರ್ಸ್ ವ್ಯವಸ್ಥೆಯನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ  ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಅವರು ಗುರುವಾರ ಪುರಭವನದಲ್ಲಿ  ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ  ಏರ್ಪಡಿಸಲಾಗಿದ್ದ ಮಹಿಳಾ ಸಂಜೀವಿನಿ ಒಕ್ಕೂಟಗಳ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮಹಿಳಾ ಸ್ವಸಹಾಯ ಸಂಘಗಳಲ್ಲಿ ಈಗ ತರಹೇವಾರಿ ಉತ್ಪನ್ನಗಳು ತಯಾರಾಗುತ್ತಿದ್ದು, ಭಾರೀ ವಹಿವಾಟು ನಡೆಯುತ್ತಿದೆ. ಇದರಲ್ಲಿ ಅಕ್ರಮಕ್ಕೆ ಎಡೆ ಮಾಡಿಕೊಡಬಾರದೆನ್ನುವ ಉದ್ದೇಶದಿಂದ ಈ ಸಂಘಗಳ ವಹಿವಾಟು ಸ್ವರೂಪವನ್ನೆಲ್ಲ ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಇದಕ್ಕಾಗಿ ಅಮೆಝಾನ್ ಮತ್ತು ಫ್ಲಿಫ್ಕಾರ್ಟ್ ತರಹದ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸ್ವಸಹಾಯ ಸಂಘಗಳಲ್ಲಿರುವವರು ವಾರ್ಷಿಕ ಕನಿಷ್ಠ 1 ಲಕ್ಷ ರೂಪಾಯಿಯಷ್ಟಾದರೂ ಆದಾಯ ಗಳಿಸುವಂತೆ ಮಾಡಬೇಕೆನ್ನುವುದೇ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ `ಮಹಿಳಾ ಸಂಜೀವಿನಿ’ ಯೋಜನೆಯ ಗುರಿಯಾಗಿದೆ. ಇದಕ್ಕೆ ಪೂರಕವಾಗಿ ಸ್ವಸಹಾಯ ಸಂಘಗಳಲ್ಲಿರುವ ಬುಕ್ ರೈಟರ್ಸ್ ಗಳಿಗೆ ಬ್ಯಾಂಕಿಂಗ್ ತರಬೇತಿ ನೀಡುವ ಜತೆಗೆ ಸದ್ಯದಲ್ಲೇ ಮೊಬೈಲ್ ಬ್ಯಾಂಕಿಂಗ್ ಕೈಗೆತ್ತಿಕೊಳ್ಳುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಜೊತೆಗೆ, ಮಹಿಳೆಯರು ತಯಾರಿಸುವ ಉತ್ಪನ್ನಗಳು ಸುರಕ್ಷಿತವಾಗಿ ಇಟ್ಟುಕೊಳ್ಳಲು ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲೂ ಒಂದು ಗೋದಾಮು ಕಟ್ಟಡವನ್ನು ನಿರ್ಮಿಸಿ ಕೊಡಲಾಗುವುದು. ಈ ಯೋಜನೆಯಡಿ ಹಲವೆಡೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಉಳಿದೆಡೆಗಳಲ್ಲೂ ತ್ವರಿತ ಗತಿಯಲ್ಲಿ ಕಟ್ಟಡವನ್ನು ಕಟ್ಟಿಕೊಡಲಾಗುವುದು ಎಂದು ಅವರು ಆಶ್ವಾಸನೆ ನೀಡಿದರು.

ಮಹಿಳೆಯರು ಸ್ವಸ್ಥ ಸಮಾಜದ ಆಧಾರಸ್ತಂಭಗಳಾಗಿದ್ದು, ಇವರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಕೇಂದ್ರ ಸರಕಾರದ `ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆಯಡಿ 1 ಕೋಟಿ ರೂ.ವರೆಗೂ ಯಾವುದೇ ಖಾತ್ರಿ ಇಲ್ಲದೆ ಬ್ಯಾಂಕ್ ಸಾಲ ಕೊಡಲಾಗುತ್ತಿದೆ. ಇದು ಮಹಿಳೆಯರಲ್ಲಿ ಉದ್ಯಮಶೀಲತೆ ಬೆಳೆಯಲು ಸಹಕಾರಿಯಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ 20 ಲಕ್ಷ ಮಹಿಳೆಯರು ಸ್ವಸಹಾಯ ಸಂಘಗಳಲ್ಲಿ ಸದಸ್ಯೆಯರಾಗಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 62 ಸಾವಿರ ಸದಸ್ಯೆಯರಿದ್ದು, ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಕೃಷಿ, ಪಶು ಸಂಗೋಪನೆ ನರೇಗಾ, ಸ್ವಚ್ಛ ಭಾರತ ಮುಂತಾದ ಮಹತ್ವಾಕಾಂಕ್ಷಿ ಯೋಜನೆಗಳಡಿಯಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಮಾಡಲಾಗಿದೆ ಎಂದರು.

'ಸಂಜೀವಿನಿ’ ಯೋಜನೆಯಡಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ವಿಶ್ವಾಸಾರ್ಹ ಮಾರುಕಟ್ಟೆ ಸಿಗುವಂತೆ ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಮನ್ನಣೆ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಇದರ ಜತೆಗೆ ಇಲಾಖೆಯ ಮೂಲಕ ಸರ್ಟಿಫಿಕೇಟ್ ಕೋರ್ಸುಗಳನ್ನು ಕೂಡ ಒದಗಿಸಲಾಗುತ್ತಿದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ, ಜಿಲ್ಲಾ ಪಂ. ಸಿಇಒ ಡಾ.ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X