Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಯೂರೋಪ್‌ನ ಅತಿದೊಡ್ಡ ಅಣುವಿದ್ಯುತ್...

​ಯೂರೋಪ್‌ನ ಅತಿದೊಡ್ಡ ಅಣುವಿದ್ಯುತ್ ಕೇಂದ್ರದ ಮಲೆ ರಷ್ಯಾ ಶೆಲ್ ದಾಳಿ

ವಾರ್ತಾಭಾರತಿವಾರ್ತಾಭಾರತಿ4 March 2022 7:16 AM IST
share
​ಯೂರೋಪ್‌ನ ಅತಿದೊಡ್ಡ ಅಣುವಿದ್ಯುತ್ ಕೇಂದ್ರದ ಮಲೆ ರಷ್ಯಾ ಶೆಲ್ ದಾಳಿ

ಕೀವ್: ಉಕ್ರೇನ್‌ನಲ್ಲಿರುವ ಯೂರೊಪ್‌ನ ಅತಿದೊಡ್ಡ ಅಣುವಿದ್ಯುತ್ ಕೇಂದ್ರದ ಮೇಲೆ ರಷ್ಯನ್ ಪಡೆಗಳು ಶುಕ್ರವಾರ ಮುಂಜಾನೆ ಶೆಲ್ ದಾಳಿ ನಡೆಸುತ್ತಿವೆ. ರಷ್ಯನ್ ಪಡೆಗಳು ಎಲ್ಲೆಡೆಯಿಂದ ಝೆಪೊರಿಝ್ಝಿಯಾ ಅಣುವಿದ್ಯುತ್ ಕೇಂದ್ರದ ಮೇಲೆ ದಾಳಿ ನಡೆಸುತ್ತಿವೆ ಎಂದು ಉಕ್ರೇನ್ ವಿದೇಶಾಂಗ ವ್ಯವಹಾರಗಳ ಸಚಿವ ಡೈಟ್ರೊ ಕುಲೆಬಾ ಹೇಳಿದ್ದಾರೆ.

ಈಗಾಗಲೇ ಬೆಂಕಿ ಹತ್ತಿಕೊಂಡಿದ್ದು, ಇದು ಸ್ಫೋಟಗೊಂಡರೆ ಅದು ಚೆರ್ಲೋಬಿಲ್ ದುರಂತದ ಹತ್ತು ಪಟ್ಟು ದೊಡ್ಡ ಸ್ಫೋಟವಾಗಬಹುದು ಎಂದು ಅವರು ಟ್ವೀಟ್ ಮಾಡಿದ್ದಾರೆ. ರಷ್ಯಾ ತಕ್ಷಣವೇ ಬೆಂಕಿಯನ್ನು ನಂದಿಸಬೇಕು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭದ್ರತಾ ವಲಯವನ್ನು ಸ್ಥಾಪಿಸಲು ಅವಕಾಶ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬೆಂಕಿಯ ಜ್ವಾಲೆ ಮತ್ತು ದಟ್ಟ ಹೊಗೆ ಅಣುವಿದ್ಯುತ್ ಘಟಕ ಹೊಂದಿರುವ ನಗರದಿಂದ ಏಳುತ್ತಿರುವುದು ವಿಡಿಯೊಗಳಿಂದ ಕಂಡುಬರುತ್ತದೆ. ಈ ನಗರ 50 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಧ್ವಂಸವಾದ ಕಾರುಗಳಿಂದ ಜನ ಹೊರಬರುತ್ತಿರುವುದು ಕಾಣಿಸುತ್ತಿದೆ. ಈ ಸಂಘರ್ಷ ಉಕ್ರೇನ್‌ನ 15 ಅಣು ರಿಯಾಕ್ಟರ್‌ಗಳಿಗೆ ಆಕಸ್ಮಿಕ ಹಾನಿ ಮಾಡಬಹುದು ಎಂದು ವಿಶ್ವಸಂಸ್ಥೆಯ ಅಣ್ವಸ್ತ್ರ ಕಣ್ಗಾವಲು ಸಂಸ್ಥೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ.

ಉಕ್ರೇನ್‌ನ ಒಡೆಸಾ, ಬಿಲಾ ಟೆರ್‌ಕ್ವಾ ಮತ್ತು ವೊಲಿನ್ ಒಬ್ಲಾಸ್ಟ್ ಪಟ್ಟಣಗಳ ಮೇಲೆ ವಾಯುದಾಳಿ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ನಿವಾಸಿಗಳು ಹತ್ತಿರದ ಶೆಲ್ಟರ್‌ಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾಗಿ ಕೀವ್ ಇಂಡಪೆಂಡೆಂಟ್ ವರದಿ ಮಾಡಿದೆ. ನಗರದ ಹೊರವಲಯದಲ್ಲಿ ಉಕ್ರೇನ್ ಪಡೆಗಳು ರಷ್ಯನ್ ಸೈನಿಕರ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಎನೆರ್ಹೊದರ್ ನಗರದ ಮೇಯರ್ ಹೇಳಿದ್ದಾರೆ.

#WATCH | Adviser to the Head of the Office of President of Ukraine Volodymyr Zelenskyy tweets a video of "Zaporizhzhia NPP under fire..."#RussiaUkraine pic.twitter.com/R564tmQ4vs

— ANI (@ANI) March 4, 2022

Russian army is firing from all sides upon Zaporizhzhia NPP, the largest nuclear power plant in Europe. Fire has already broke out. If it blows up, it will be 10 times larger than Chornobyl! Russians must IMMEDIATELY cease the fire, allow firefighters, establish a security zone!

— Dmytro Kuleba (@DmytroKuleba) March 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X