Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2022-23ನೇ ಸಾಲಿನ ರಾಜ್ಯ ಬಜೆಟ್ ನ...

2022-23ನೇ ಸಾಲಿನ ರಾಜ್ಯ ಬಜೆಟ್ ನ ಪ್ರಮುಖ ಅಂಶಗಳು

ವಾರ್ತಾಭಾರತಿವಾರ್ತಾಭಾರತಿ4 March 2022 12:17 PM IST
share
2022-23ನೇ ಸಾಲಿನ ರಾಜ್ಯ ಬಜೆಟ್ ನ ಪ್ರಮುಖ ಅಂಶಗಳು

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ ₹250 ಕೋಟಿ ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ

► ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ.


► "ನೇಕಾರರ ಸಮ್ಮಾನ್" ಯೋಜನೆಯಡಿ ನೋಂದಾಯಿತ ಕೈಮಗ್ಗ ನೇಕಾರರ ವಾರ್ಷಿಕ ನೆರವು 5,000 ರೂ. ಗಳಿಗೆ ಹೆಚ್ಚಳ.

►ರಾಜ್ಯದ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‍ಗಳ ಮೂಲಕ ನೇಕಾರರು ಪಡೆಯುವ ಸಾಲದ ಮೇಲೆ ಶೇ.8ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.

►ನೇಕಾರರ ಮಕ್ಕಳಿಗೆ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ.

-----------------------------------------------------

ನಾರಾಯಣ ಗುರು ವಸತಿ ಶಾಲೆ:

ಮಾನವೀಯತೆ, ಸಮಾನತೆಯ ಹರಿಕಾರ ಶ್ರೀ ನಾರಾಯಣಗುರು ಅವರ ಸ್ಮರಣಾರ್ಥ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿವಿಧ ಸಮುದಾಯಗಳ ಅಭಿವೃದ್ದಿ ನಿಗಮಗಳ ಮೂಲಕ 400 ಕೋಟಿ ರೂ. ಮೊತ್ತದ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ದೇವರಾಜ ಅರಸು ನಿಗಮದ ಮೂಲಕ ಹಿಂದುಳಿದ ಹಾಗೂ ಅತೀ ಹಿಂದುಳಿದ ತಿಗಳ, ಮಾಳಿ, ಮಾಳಿ ಮಾಲಗಾರ, ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರಿಯ, ಮೇದಾರ, ಪಿಂಜಾರ/ನದಾಫ್, ಕುರುಬ, ಬಲಿಜ, ಈಡಿಗ ಹಾಗೂ ಇತರೆ ಜನಾಂಗದ ಅಭಿವೃದ್ಧಿಗೆ 400 ಕೋಟಿ ರೂ.ಮೊತ್ತದ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. 

ಸಾಹಿತ್ಯ ಸೇವೆ ಉಳಿಸಲು ವಿಶೇಷ ಯೋಜನೆ:

‘ಡಾ.ಸಿದ್ಧಲಿಂಗಯ್ಯ, ಡಾ.ಚಿದಾನಂದಮೂರ್ತಿ, ಡಾ.ಚಂದ್ರಶೇಖರ ಪಾಟೀಲ, ಚೆನ್ನವೀರ ಕಣವಿ ಅವರ ಅಮೂಲ್ಯ ಸಾಹಿತ್ಯ ಸೇವೆಯನ್ನು ಉಳಿಸಲು ವಿಶೇಷ ಯೋಜನೆ. ಮಂಗಳೂರು ವಿವಿಯಲ್ಲಿ ಅರೇ ಭಾಷೆ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುವುದು. ನೆರೆ ರಾಜ್ಯಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ಕಾಸರಗೋಡಿನಲ್ಲಿ ಕಯ್ಯಾರ ಕಿಂಞಣ್ಣ ರೈ ಅವರ ಹೆಸರಿನಲ್ಲಿ, ಅಕ್ಕಲಕೋಟೆಯಲ್ಲಿ ಜಯದೇವಿತಾಯಿ ಲಿಗಾಡೆ ಮತ್ತು ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು

‘ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಅನುದಾನ. ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸರಕಾರದಿಂದ ತಲಾ 5 ಸಾವಿರ ರೂ.ಸಹಾಯಧನ ಘೋಷಣೆ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್‍ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭಿಸುವುದು, ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸಲಾಗುವುದು. 


ಪ್ರವಾಸೋದ್ಯಮ ಅಭಿವೃದ್ಧಿ

• ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು-ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ.

• ಬೇಲೂರು, ಹಳೇಬೀಡು, ಸೋಮನಾಥಪುರಗಳನ್ನು ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.  

• ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‍ವೇ ಅಭಿವೃದ್ಧಿ.
• ನಂದಿ ಬೆಟ್ಟದಲ್ಲಿ 93 ಕೋಟಿ ರೂ. ವೆಚ್ಚದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಅನುಮೋದನೆ. ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕ್ರಮ.

• ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ.  

• ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ.

• ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿ.ಆರ್.ಜಡ್ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮ.

• ತದಡಿ ಬಂದರಿನಲ್ಲಿ ಸಮಗ್ರ ಪರಿಸರ-ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ.

• ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ.

• ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು Adopt a Monument“ ಯೋಜನೆ ಜಾರಿ.

► ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ.

► ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ.

► ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ


ಯಶಸ್ವಿನಿ ಪರಿಷ್ಕರಿಸಿ ಮರು ಜಾರಿ

ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಲು ನಿರ್ಧರಿಸಲಾಗಿದ್ದು, ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳು ಲಭಿಸಿದ್ದು, ಈ ಉದ್ದೇಶಕ್ಕಾಗಿ ರಾಜ್ಯ ಸರಕಾರದಿಂದ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು.

2022-23ನೆ ಸಾಲಿನಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಒಟ್ಟು 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ.ಗಳ ಕೃಷಿ ಸಾಲ ವಿತರಿಸುವ ಗುರಿ ಹೊಂದಿದ್ದು, ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಹೊಸ ಸಾಲವನ್ನು ನೀಡಲಾಗುವುದು.


► ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ ?

ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ

ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ

ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ,

ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ

ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ

ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ

ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ

ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ

ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ

ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ

ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ.


► ಮೇಕೆದಾಟು ಯೋಜನೆಗೆ 1000 ಕೋಟಿ ರೂ. 

► ಎತ್ತಿನ ಹೊಳೆ ಯೋಜನೆಗೆ  3000 ಕೋಟಿ ರೂ. 

► ಭದ್ರಾ ಮೇಲ್ದಂಡೆಗೆ 3000 ಕೋಟಿ ರೂ.

► ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ 1000 ಕೋಟಿ ರೂ. 

► ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣ.

► ಆಶಾ ಕಾರ್ಯಕರ್ತೆಯರಿಗೆ ಗೌರವಧನ 1000  ರೂ. ಹೆಚ್ಚಳ 

►ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

►ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ’

►ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ ₹1,880 ಕೋಟಿ ರೂ.

►ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಬಂದರು ನಿರ್ಮಾಣ

►350 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ

►ಕಾರವಾರದಲ್ಲಿ ಜಲಸಾರಿಗೆ, ಮೀನುಗಾರಿಕಾ ಸಂಸ್ಥೆ ಸ್ಥಾಪನೆ, ತದಡಿ-ಅಘನಾಶಿನಿ ಮಧ್ಯೆ ದೋಣಿ ಮಾರ್ಗ ನಿರ್ಮಾಣ 

►2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2,610 ಕೋ.ರೂ.ಗಳ ಯೋಜನೆಗಳ ಅನುಷ್ಠಾನ

►ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ’

►ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

►ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ

►ಯುವ ಸಬಲೀಕರಣ ಹಾಗೂ  ಕ್ರೀಡೆಗೆ ಪ್ರೋತ್ಸಾಹ

►ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ, 10,000 ಜನರಿಗೆ ಉದ್ಯೋಗಾವಕಾಶ

►ರಾಜ್ಯದಲ್ಲಿ ಸೆಮಿ ಕಂಡಕ್ಟರ್ ತಯಾರಿಕಾ ಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ

►ಮೈಸೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಪ್ರೋತ್ಸಾಹ ನೀಡಲು ತಲಾ 20 ಕೋಟಿರೂ. ವೆಚ್ಚದಲ್ಲಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಫಾರ್ ಸ್ಟಾರ್ಟ್ ಅಪ್ ಸ್ಥಾಪನೆ.

►ನವಲಗುಂದ, ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್ ಸ್ಥಾಪನೆ

►ಕಲಬುರಗಿ ಹಾಗೂ ವಿಜಯಪುರದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾಪ

►ಸರ್ವರಿಗೂ ಸೂರು ಯೋಜನೆ ಅಡಿ 6,612 ಕೋ.ರೂ. ವೆಚ್ಚದಲ್ಲಿ 5 ಲಕ್ಷ ಹೊಸ ಮನೆ ನಿರ್ಮಾಣ.

►ಪೌರ ಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ ನೀಡಲಾಗುವುದು.

ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ

►ಆಯ್ದ ಸ್ವಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು. 500 ಕೋ.ರೂ. ಅನುದಾನ. ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ. 3.9 ಲಕ್ಷ ಮಹಿಳೆಯರಿಗೆ ಅನುಕೂಲ.

►ಮಹಿಳಾ ಸ್ವಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ

►ಯಶಸ್ವಿನಿ ಯೋಜನೆ ಮರು ಜಾರಿಗೆ 300 ಕೋಟಿ ಅನುದಾನ

►ಎಸ್ ಸಿ ಎಸ್ಟಿ ಅಭಿವೃದ್ದಿ ನಿಗಮಗಳಿಗೆ  800 ಕೋ.ರೂ.

►ಎಸ್ ಸಿ ಎಸ್ಟಿ ಮಠಗಳಿಗೆ ವಿಶೇಷ ನೆರವು

ಸಿಎಂ ಆರೋಗ್ಯ ವಾಹಿನಿ

►ಆರೋಗ್ಯ ಸೇವೆಗೆ ಏರ್  ಆ್ಯಂಬುಲೆನ್ಸ್

►ಹುಬ್ಬಳ್ಳಿಯಲ್ಲಿ 250 ಕೋ.ರೂ. ವೆಚ್ಚದಲ್ಲಿ ಜಯದೇವ ಆಸ್ಪತ್ರೆ

►ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು

► ಆಹಾರ ಇಲಾಖೆಗೆ  2, 288 ಕೋಟಿ ರೂ.

► 30 ಸರ್ಕಾರಿ  ಐಟಿಐ ಕಾಲೇಜು ಮೇಲ್ದರ್ಜೆಗೆ

► ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ

► ರಾಜ್ಯದಲ್ಲಿ ವಿನೂತನ ಮಾದರಿಯ 7 ವಿವಿಗಳ ಸ್ಥಾಪನೆ

► ರಾಜ್ಯದ ಕರೆಗಳ ಅಭಿವೃದ್ಧಿಗೆ 500ಕೋಟಿ ರೂ. 

► ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ 4. 713 ಕೋಟಿ ರೂ. 

► ಕೃಷಿಗೆ 33, 700 ಕೋಟಿ ರೂ.

► ಬೆಂಗಳೂರು ಅಭಿವೃದ್ಧಿಗೆ 8, 409 ಕೋಟಿ ರೂ.

► ಆಡಳಿತ ಸುಧಾರಣೆಗೆ 56, 710 ಕೋಟಿ ರೂ. 


Live update- 12: 30 pm: ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಆರಂಭ


Live update- 12: 26 pm: ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ  


Live update- 12:15pm: ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭ

ಆಯವ್ಯಯ 2022-23 ರ ಮುಖ್ಯಾಂಶಗಳು.

ವಿಮಾನ ನಿಲ್ದಾಣ. #ಜನಸಾಮಾನ್ಯರಬಜೆಟ್ pic.twitter.com/xcgDA6XjoK

— Basavaraj S Bommai (@BSBommai) March 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X