ಮಾ. 6: ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ; ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ, ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ- 2021 ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಸನ್ಮಾನ ಸಮಾರಂಭ ಮಾ.6ರಂದು ಆಯೋಜಿಸಲಾಗಿದೆ.
ಹಿರಿಯ ಪತ್ರಕರ್ತರಾದ ದಿನಕರ ಇಂದಾಜೆ, ವಿದ್ಯಾಧರ ಶೆಟ್ಟಿ, ರಾಜೇಶ್ ನಾಯ್ಕ್ (ವಾರ್ತಾ ಭಾರತಿಯ ಮುಖ್ಯ ಉಪಸಂಪಾದಕ), ಯಶವಂತ ಕಾಟಿಪಳ್ಳ, ಸತೀಶ್ ಕಲ್ಮಾಡಿ (ವಾರ್ತಾ ಭಾರತಿಯ ಮ್ಯಾಗಝಿನ್ ಸಂಪಾದಕ) ಮತ್ತು ವೆಂಕಟೇಶ್ ಬಂಟ್ವಾಳ ಅವರಿಗೆ ಚಲನಚಿತ್ರ ನಟ ನವೀನ್ ಡಿ. ಪಡೀಲ್ 2021ನೇ ಸಾಲಿನ ಗೌರವ ಸನ್ಮಾನ ನೆರವೇರಿಸಲಿದ್ದಾರೆ.
ಸಮಾಜಸೇವಕ ರವಿ ಕಕ್ಯೆಪದವು ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಯಡಪಡಿತ್ತಾಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಗಳೂರು ಉಪಅರಣ್ಯ ಸಂರಕ್ಷಣಾಕಾರಿ ಡಾ. ವೈ. ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ತಣ್ಣೀರುಬಾವಿ ಟ್ರೀ ಪಾರ್ಕ್ ಗೆಸ್ಟ್ ಹೌಸ್ ಬಳಿ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ. ಸದಾಶಿವ ಶೆಣೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾಜಸೇವಕ ರವಿ ಕಕ್ಯೆಪದವು ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಯಡಪಡಿತ್ತಾಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತರಾದ ದಿನಕರ ಇಂದಾಜೆ, ವಿದ್ಯಾಧರ ಶೆಟ್ಟಿ, ರಾಜೇಶ್ ನಾಯ್ಕ್, ಯಶವಂತ ಕಾಟಿಪಳ್ಳ, ಸತೀಶ್ ಕಲ್ಮಾಡಿ ಮತ್ತು ವೆಂಕಟೇಶ್ ಬಂಟ್ವಾಳ ಅವರಿಗೆ ಚಲನಚಿತ್ರ ನಟ ನವೀನ್ ಡಿ. ಪಡೀಲ್ 2021ನೇ ಸಾಲಿನ ಗೌರವ ಸನ್ಮಾನ ನೆರವೇರಿಸಲಿದ್ದಾರೆ. ಮಂಗಳೂರು ಉಪಅರಣ್ಯ ಸಂರಕ್ಷಣಾಕಾರಿ ಡಾ. ವೈ. ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







