Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ...

ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ4 March 2022 9:42 PM IST
share
ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ ಟೀಕೆ

ಬೆಂಗಳೂರು, ಮಾ.4: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ್ದು “ಉಪ್ಪು ಹುಳಿ ಖಾರ” ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಮಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

ಶುಕ್ರವಾರ ವಿಧಾನಸೌಧದ ಬಳಿ ಬಜೆಟ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ” ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ ಸಚಿವರಾಗಿದ್ದರು. ಆದರೂ ಅವರು ಸ್ವತಂತ್ರವಾಗಿ ಮುಂಗಡ ಪತ್ರ ಮಂಡಿಸಿರುವ ಬಗ್ಗೆ ನನಗೆ ಸಂಶಯವಿದೆ. ಯಾರದ್ದೋ ಒತ್ತಡಕ್ಕೆ ಸಿಲುಕಿ ಮಂಡಿಸಿದಂತಿದೆ. ತಮ್ಮ ಚೊಚ್ಚಲ ಮುಂಗಡ ಪತ್ರವನ್ನೇ ಎರಡು ಗಂಟೆಗಳ ಕಾಲ ಶ್ರಮಪಟ್ಟು ಓದಿದರಾ ಅನ್ನುವುದು ನನ್ನ ಅಭಿಪ್ರಾಯ. ಅವರಿಗೆ ವಿಶ್ವಾಸದ ಕೊರತೆ ಇದ್ದಂತೆ ಇತ್ತು ಎಂದು ನನಗೆ ಅನಿಸಿತು ಎಂದು ಅವರು ಹೇಳಿದರು.

ನಿರುದ್ಯೋಗದ ಬಗ್ಗೆ ಚಕಾರವಿಲ್ಲ: ಕೋವಿಡ್ ನಂತರ ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಅಸಂಖ್ಯಾತ ಜನರು ಕೆಲಸ ಕಳೆದುಕೊಂಡಿದ್ದಾರೆ. ಹೊಸದಾಗಿ ಉದ್ಯೋಗಾವಕಾಶ ಆಗುತ್ತಿಲ್ಲ. ಯುವಜನರು ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಎಲ್ಲೂ ಕೆಲಸ ಸಿಗುತ್ತಿಲ್ಲ. ಆ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಕೊರೋನದಿಂದ ಆಗಿದ್ದ ಅನಾಹುತವನ್ನು ಸುಧಾರಿಸುವ ಬಗ್ಗೆ ಬಜೆಟ್ಟಿನಲ್ಲಿ ಮಾತೇ ಇಲ್ಲ. ಆದರೂ ಸಂಕಷ್ಟ ಕಾಲದಲ್ಲೂ ಆದಾಯ ನಿರೀಕ್ಷೆ ಮಾಡಿದ್ದಾರೆ ಮುಖ್ಯಮಂತ್ರಿ ಎಂದು ಕುಮಾರಸ್ವಾಮಿ ಟೀಕಿಸಿದರು.

ಗ್ರೈಂಡರ್‍ನಲ್ಲಿ ಮಿಕ್ಸ್ ಮಾಡಿದ್ದಾರೆ: ಕೃಷಿ, ನೀರಾವರಿ ಸೇರಿ ಐದು ವಲಯಗಳು ಎಂದು ಹೊಸ ಪ್ರಯೋಗ ಮಾಡಲು ಹೋಗಿದ್ದೇವೆ ಎಂದು ಪ್ರದರ್ಶನ ಮಾಡಿದ್ದಾರೆ. ಎಲ್ಲ ವಲಯಗಳನ್ನೂ ಮಿಕ್ಸ್ ಮಾಡಿ ಗ್ರೈಂಡರ್‍ನಲ್ಲಿ ಹಾಕಿ ರುಬ್ಬಿದ ಹಾಗೆ ಮಾಡಿದ್ದಾರೆ. ಯಾರಿಗೂ ಏನೂ ಕಾಣಬಾರದು ಎನ್ನುವ ಹಾಗೆ ಮಾಡಿದ್ದಾರೆ ಎಂದು ಮುಂಗಡ ಪತ್ರವನ್ನು ಅವರು ವಿಶ್ಲೇಷಣೆ ಮಾಡಿದರು.

ಮೀಸಲು ಅರಣ್ಯದಲ್ಲಿ ಉದ್ಯಾನವನ ಬಾಲಿಷ ಘೋಷಣೆ: ಮೀಸಲು ಅರಣ್ಯ ಪ್ರದೇಶ ಜಾರಕು ಬಂಡೆ ಅರಣ್ಯದಲ್ಲಿ ಪಾರ್ಕ್ ಮಾಡುವ ಬಗ್ಗೆ ಹೇಳುವುದಾದರೆ, “ಈಗಾಗಲೇ ನಗರದಲ್ಲಿ ಅನೇಕ ಉದ್ಯಾನವನಗಳು ಇವೆ. ಅನೇಕ ಪಾರ್ಕ್‍ಗಳಲ್ಲಿ ಈಗಾಗಲೇ ಜನರು ವಾಯುವಿಹಾರ ಮಾಡುತ್ತಿದ್ದಾರೆ. ಲಾಲ್ ಬಾಗ್‍ನಂಥ ಬೊಟಾನಿಕಲ್ ಗಾರ್ಡನ್ ನಗರದಲ್ಲಿದೆ ಎಂದು ಅವರು ಹೇಳಿದರು.

ದೇಶದ 12 ಬೊಟಾನಿಕಲ್ ಗಾರ್ಡೆನ್‍ಗಳಲ್ಲಿ ಅದೂ ಒಂದು. ಅಲ್ಲಿ ಸಂಶೋಧನೆಯನ್ನು ನಡೆಸಬಹುದು. ದೇಶ-ವಿದೇಶಗಳ ಸಾವಿರಾರು ತಳಿಯ ಸಸ್ಯಗಳಿವೆ. ಆದರೆ ಮೀಸಲು ಅರಣ್ಯದ 350 ಎಕರೆಯಲ್ಲಿ ಉದ್ಯಾನವನ ಮಾಡುವ ಅಗತ್ಯವೇನು? ಇದು ಅತ್ಯಂತ ಬಾಲಿಶ ಪ್ರಸ್ತಾವನೆ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಕಳೆದ ಕಲಾಪದಲ್ಲಿ ನಡೆದ ರಾಜ್ಯಪಾಲರ ಭಾಷಣವೇ ಕಳಪೆ. ಬಜೆಟ್ ಕೂಡ ಹಾಗೆಯೇ ಇದೆ. ಇನ್ನು ಮೇಕೆದಾಟು ಯೋಜನೆಗೆ 1,000 ಕೋಟಿ ರೂ.ಘೋಷಣೆ ಮಾಡಿದ್ದಾರೆ. ನಿನ್ನೆ ಪಾದಯಾತ್ರೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರು ಈ ಯೋಜನೆಗೆ 5,000  ಕೋಟಿ ರೂ.ನೀಡಬೇಕು ಎಂದು ಹೇಳಿದ್ದರು. ಬಹುಶಃ ಅವರಿಗೆ ಗೌರವ ಕೊಡೋದಿಕ್ಕೆ 1,000 ಕೋಟಿ ರೂ.ಇಟ್ಟಿದ್ದಾರೇನೊ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 23,000 ಕೋಟಿ ರೂ. ಬೇಕು. ಆದರೆ ಇವರು ಕೊಟ್ಟಿರುವುದು ಕೇವಲ 3,000 ಕೋಟಿ ರೂ.ಮಾತ್ರ. ಹತ್ತು ವರ್ಷವಾದರೂ ಒಂದು ಹನಿ ನೀರನ್ನೂ ಕೊಡದ ಎತ್ತಿನಹೊಳೆಗೆ ಮತ್ತೆ 3,000 ಕೋಟಿ ರೂ.ಘೋಷಣೆ ಮಾಡಿದ್ದಾರೆ. ಅದಕ್ಕೆ ನಾನು ಹೇಳಿದ್ದು, ಇದು ಅಂಕಿ ಅಂಶಗಳ ಆಲಂಕಾರಿಕ ಬಜೆಟ್ ಎಂದು ಕುಮಾರಸ್ವಾಮಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X