ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಕಾಪು: ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇನ್ನಂಜೆ -ಬಂಟಕಲ್ ರಸ್ತೆಯ ಕಲ್ಲುಗುಡ್ಡೆ ಎಂಬಲ್ಲಿ ಮಾ.4ರಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ.
ಮೃತರನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಶೇಖರ್ ಕೋಟ್ಯಾನ್ ಎಂಬವರ ಮಗ ಸುನೀಲ್ ಕುಮಾರ್(31) ಎಂದು ಗುರುತಿಸಲಾಗಿದೆ. ಇನ್ನಂಜೆ ಕಡೆಯಿಂದ ಬಂಟಕಲ್ಲು ಕಡೆಗೆ ಹೋಗುತ್ತಿದ್ದ ಸುನೀಲ್ ಬೈಕ್‌ಗೆ, ಎದುರಿನಿಂದ ಬಂಟಕಲ್ ಕಡೆಯಿಂದ ಇನ್ನಂಜೆ ಕಡೆಗೆ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೈಕ್ ಸಮೇತಾ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುನೀಲ್ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story