ಡಿಸಿ ಪರಿಶೀಲನೆ ವರೆಗೆ ಚಾಮರಾಜನಗರ ಜಿಲ್ಲಾದ್ಯಂತ ಗಣಿ ಗಾರಿಕೆ ಸ್ಥಗಿತ: ಸಚಿವ ವಿ.ಸೋಮಣ್ಣ

ಚಾಮರಾಜನಗರ, ಮಾ.5: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ ದುರಂತದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಇರುವ ಎಲ್ಲ ಗಣಿ ಕ್ರಷರ್ ಗಳನ್ನು ಸದ್ಯ ಸ್ಥಗಿತಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಜಿಲ್ಲೆಯಲ್ಲಿರುವ ಎಲ್ಲ ಗಣಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಇಂತಹ ಘಟನೆಗಳು ಪುನರಾವರ್ತನೆಯಾಗಬಾರದು. ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ಕಲ್ಲು ಗಣಿಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜಿಲ್ಲಾಧಿಕಾರಿಗಳು, ಗಣಿ ಇಲಾಖೆಯ ಅಧಿಕಾರಿಗಳ ತಂಡವು ಜಿಲ್ಲೆಯ ಪ್ರತಿ ಗಣಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಎಲ್ಲ ದಾಖಲೆಗಳು ಸರಿ ಇದ್ದರೆ, ನಿಯಮ ಪ್ರಕಾರ ನಡೆಯುತ್ತಿದ್ದರೆ ತಕ್ಷಣವೇ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.





