ದ.ಕ. ಜಿಲ್ಲೆಯಲ್ಲಿ ಶನಿವಾರ ಐವರಿಗೆ ಕೋವಿಡ್ ಸೋಂಕು
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರ ಐವರಿಗೆ ಕೋವಿಡ್ ಸೋಂಕು ತಗುಲಿದ್ದು, 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,35,422 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,33,541 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 34 ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.0.25 ದಾಖಲಾಗಿದೆ. ಅಲ್ಲದೆ ಈವರೆಗೆ 1847 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
Next Story