Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಪದವಿ ಕಾಲೇಜುಗಳಿಗೆ ಪ್ರಭಾರಿ...

ಸರಕಾರಿ ಪದವಿ ಕಾಲೇಜುಗಳಿಗೆ ಪ್ರಭಾರಿ ಪ್ರಾಂಶುಪಾಲರ ನೇಮಕ: ಸಚಿವ ಅಶ್ವತ್ಥನಾರಾಯಣ

''ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ''

ವಾರ್ತಾಭಾರತಿವಾರ್ತಾಭಾರತಿ5 March 2022 8:00 PM IST
share
ಸರಕಾರಿ ಪದವಿ ಕಾಲೇಜುಗಳಿಗೆ ಪ್ರಭಾರಿ ಪ್ರಾಂಶುಪಾಲರ ನೇಮಕ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಪ್ರಭಾರಿ ಪ್ರಾಂಶುಪಾಲರಾಗಿ ಕೌನ್ಸೆಲಿಂಗ್ ಮೂಲಕ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಈ ಹುದ್ದೆಗಳಲ್ಲಿ ಗ್ರೇಡ್-1 ದರ್ಜೆಯ 327 ಹುದ್ದೆಗಳು ಪದವಿ ಕಾಲೇಜುಗಳಲ್ಲಿ ಮತ್ತು ಗ್ರೇಡ್-2 ದರ್ಜೆಯ 38 ಹುದ್ದೆಗಳು ಸ್ನಾತಕೋತ್ತರ ಕೋರ್ಸ್ ಇರುವ ಪದವಿ ಕಾಲೇಜುಗಳಲ್ಲಿ ಲಭ್ಯವಿವೆ. ಈ ಹುದ್ದೆಗಳಲ್ಲಿ ಇದುವರೆಗೂ ಕಾರ್ಯ ನಿರ್ವಹಿಸುತ್ತಿದ್ದವರು ಫೆಬ್ರವರಿ ತಿಂಗಳಲ್ಲಿ ನಿವೃತ್ತರಾಗಿದ್ದಾರೆ. ಹೀಗಾಗಿ, ಕಾಲೇಜುಗಳಲ್ಲಿ ನಾಯಕತ್ವದ ಕೊರತೆ ಉಂಟಾಗಬಾರದೆಂಬ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಪ್ರಾಂಶುಪಾಲರ ಹುದ್ದೆ ಖಾಲಿ ಇರುವ ಕಾಲೇಜುಗಳ ವಿವರಗಳನ್ನು ಕೌನ್ಸೆಲಿಂಗ್ ಆರಂಭಿಸುವುದಕ್ಕೂ 15 ದಿನಗಳ ಮೊದಲೇ ಕಾಲೇಜು ಶಿಕ್ಷಣ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಪ್ರಭಾರಿ ನೇಮಕ ಪ್ರಕ್ರಿಯೆಯಲ್ಲೂ ಸೇವಾಜ್ಯೇಷ್ಠತೆಯ ಆಧಾರದ ಮೇಲೆಯೇ ಆಯ್ಕೆ ಶ್ರೇಣಿ ಉಪನ್ಯಾಸಕರು, ಸಹ ಮತ್ತು ಸಹಾಯಕ ಪ್ರಾಧ್ಯಾಪಕರನ್ನು ಮಾತ್ರವೇ ಕೌನ್ಸಿಲಿಂಗಿಗೆ ಕರೆಯಲಾಗುವುದು. ಜತೆಗೆ, ಈ ಹುದ್ದೆಗೆ ಆಯ್ಕೆಯಾಗುವವರು ಬೋಧಿಸುವಂತಹ ವಿಷಯವು ಆಯಾ ಕಾಲೇಜಿನಲ್ಲಿ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. 

ಈ ಕಾಲೇಜುಗಳಿಗೆ ಕಾಯಂ ಪ್ರಾಂಶುಪಾಲರ ನೇಮಕ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಸದ್ಯದಲ್ಲೇ ಅದು ಕೂಡ‌ ನಡೆಯಲಿದೆ. ಅಲ್ಲಿಯವರೆಗೆ ಪ್ರಭಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಕೌನ್ಸೆಲಿಂಗ್: ಸರಕಾರಿ ಕಾಲೇಜುಗಳ ಉಪನ್ಯಾಸಕರ  ವರ್ಗಾವಣೆ ಪ್ರಕ್ರಿಯೆಯನ್ನು ಕೂಡ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲೇ ನಡೆಸಲು ತೀರ್ಮಾನಿಸಲಾಗಿದ್ದು, ಈ ಪ್ರಕ್ರಿಯೆ ಕೂಡ ಕೌನ್ಸೆಲಿಂಗ್ ಮೂಲಕವೇ ನಡೆಯಲಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಗೆ ಕೆಎಟಿ ತಡೆಯಾಜ್ಞೆ ನೀಡಿದ್ದರಿಂದ, ಇದು ನನೆಗುದಿಗೆ ಬಿದ್ದಿತ್ತು. ಈಗ ಈ ತಡೆಯಾಜ್ಞೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ ಎಂದು ಅವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X